ವಿಜಯಸಾಕ್ಷಿ ಸುದ್ದಿ,ಲಕ್ಷ್ಮೇಶ್ವರ : ತಾಲೂಕಿನ ರಾಮಗಿರಿ ಮತ್ತು ಗೋವನಾಳ ಚೆಕ್‌ಪೋಸ್ಟ್ ಗಳಿಗೆ ಶನಿವಾರ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಮತ್ತು ಎಸ್‌ಪಿ ಬಿ.ಎಸ್. ನೇಮಗೌಡ ಭೇಟಿ ನೀಡಿ ಪರಿಶೀಲಿಸಿ, ಮಾಹಿತಿ ಪಡೆದರು.
ಈ ವೇಳೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಸ್ಥಳದಲ್ಲಿದ್ದ ತಹಸೀಲ್ದಾರ ವಾಸುದೇವಸ್ವಾಮಿ, ತಾ.ಪಂ ಇಓ ಕೃಷ್ಣ ಧರ್ಮರ ಮತ್ತು ಪಿಎಸ್‌ಐ ಈರಣ್ಣ ರಿತ್ತಿ ಅವರಿಗೆ ಚೆಕ್‌ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುವ ಯಾವುದೇ ಸಿಬ್ಬಂದಿ ನಿರ್ಲಕ್ಷ್ಯ ತೋರದೇ ಸಂಚರಿಸುವ ಎಲ್ಲ ವಾಹನಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ಮಾಡಬೇಕು ಮತ್ತು ವಾಹನ ಸವಾರರೊಂದಿಗೆ ಸೌಜನ್ಯದಿಂದ ವರ್ತಿಸಿ. ಚೆಕ್‌ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಿ. ಅಗತ್ಯವಿದ್ದಲ್ಲಿ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ.
ಕರ್ತವ್ಯದಲ್ಲಿದ್ದ ಸಿಬ್ಬಂದಿಗಳು ಯಾವುದೇ ತುರ್ತು ಸಂದರ್ಭದಲ್ಲಿ ಪೊಲೀಸ್ ಮತ್ತು ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳ ಸಹಾಯ ಪಡೆದುಕೊಳ್ಳಿ ಎಂದು ಸಲಹೆ-ಸೂಚನೆ ನೀಡಿದರು.
ಶನಿವಾರ ತಹಸೀಲ್ದಾರರ ನೇತೃತ್ವದಲ್ಲಿ ರಾಮಗಿರಿ ಚೆಕ್‌ಪೋಸ್ಟ್ ನಲ್ಲಿ ಸೂಕ್ತ ದಾಖಲೆಯಿಲ್ಲದೇ ಬೈಕ್ ಮೂಲಕ ಸಾಗಿಸಲಾಗುತ್ತಿದ್ದ 95 ಸಾವಿರ ರೂ ನಗದು ವಶಪಡಿಸಿಕೊಳ್ಳಲಾಗಿದೆ.