DCC Bank Election: ಬೆಳಗಾವಿ ಜಿಲ್ಲೆ ಪ್ರತಿಷ್ಠೆಯ ಕದನ ಗೆಲ್ಲೋದ್ಯಾರು..? 

0
Spread the love

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿರುವ ಡಿಸಿಸಿ ಬ್ಯಾಂಕ್ ಚುನಾವಣೆಯ ಮತದಾನ ಇಂದು ನಡೆಯುತ್ತಿದೆ. ಹದಿನಾರು ನಿರ್ದೇಶಕ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆ ಕಣದಲ್ಲಿ ಘಟಾನುಘಟಿ ನಾಯಕರೇ ಅಖಾಡಕ್ಕೆ ಧುಮುಕಿದ್ದಾರೆ. ಅಷ್ಟೇ ಅಲ್ಲದೆ ಜಾರಕಿಹೊಳಿ‌ ಮನೆತನದಿಂದ ಇಬ್ಬರು ಕುಡಿಗಳು ಚುನಾವಣಾ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.

Advertisement

ಸದ್ಯ ಡಿಸಿಸಿ ಬ್ಯಾಂಕ್ 7 ನಿರ್ದೇಶಕರ ಆಯ್ಕೆಗೆ ಇಂದು ಬೆಳಗ್ಗೆ 9 ಗಂಟೆಗೆ ಮತದಾನ ಶುರುವಾಗಿದೆ. 7 ಕ್ಷೇತ್ರದ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ಮತದಾನ ಮಾಡುತ್ತಿದ್ದಾರೆ. ನಗರದ ಬಿ.ಕೆ.ಮಾಡೆಲ್ ಹೈಸ್ಕೂಲ್‌ನಲ್ಲಿ ಮತದಾನ ನಡೆಯುತ್ತಿದೆ. ಬೆಳಗ್ಗೆ 9 ಗಂಟೆಯಿಂದ ಸಾಯಂಕಾಲ 4 ಗಂಟೆವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ.

ಒಂದೊಂದು ತಂಡವಾಗಿ ಮತದಾರರು ಮತಗಟ್ಟೆಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ಅಥಣಿ ತಾಲೂಕಿನಿಂದ 125 ಅರ್ಹ ಮತದಾರರಿದ್ದು, ಬೈಲಹೊಂಗಲ 73, ಹುಕ್ಕೇರಿ 90, ಕಿತ್ತೂರು 29, ನಿಪ್ಪಾಣಿ 119, ರಾಯಬಾಗ 205 ಹಾಗೂ ರಾಮದುರ್ಗ 105 ಮತದಾರರು ಸೇರಿ ಒಟ್ಟು 676 ಮತದಾರರಿದ್ದಾರೆ.

ಏಳು ಸ್ಥಾನಗಳಿಗೆ 14 ಅಭ್ಯರ್ಥಿಗಳು ಕಣದಲ್ಲಿದ್ದು, ಮತದಾನಕ್ಕಾಗಿ ಏಳು ತಾಲೂಕುಗಳಿಗೆ ಏಳು ಪ್ರತ್ಯೇಕ ಮತಗಟ್ಟೆ ಕೇಂದ್ರಗಳನ್ನು ತೆರೆಯಲಾಗಿದೆ. ಎಲ್ಲ ಕೇಂದ್ರಗಳಲ್ಲಿಯೂ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮತದಾನದ ಕೇಂದ್ರದ ಹೊರಗೆ ಹಾಗೂ ಒಳಗೆ ನಗರ ಪೊಲೀಸ್‌ ಆಯುಕ್ತ ಭೂಷಣ್‌ ಭೊರಸೆ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

 


Spread the love

LEAVE A REPLY

Please enter your comment!
Please enter your name here