ನೇತ್ರದಾನ ಮಾಡಿ ಮಾದರಿಯಾದ ಡಿಸಿಎಂ ಡಿ.ಕೆ. ಶಿವಕುಮಾರ್!

0
Spread the love

ಬೆಂಗಳೂರು:- ನೇತ್ರದಾನ ಮಹಾದಾನ ಎಂಬಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇದೀಗ ಎಲ್ಲರಿಗೂ ಮಾದರಿಯಾಗುವ ಕೆಲಸ ಮಾಡಿದ್ದಾರೆ. ರಾಹುಲ್ ಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಕಚೇರಿಯಲ್ಲಿ ನೇತ್ರದಾನ ಶಿಬಿರ ಆಯೋಜನೆ ಮಾಡಲಾಗಿತ್ತು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನೇತ್ರದಾನ ಮಾಡಿದರು.

Advertisement

ನೇತ್ರದಾನ ಪತ್ರಕ್ಕೆ ಸಹಿ ಹಾಕಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ರಾಹುಲ್ ಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ನಮ್ಮ ಯುವ ಕಾಂಗ್ರೆಸ್ ವತಿಯಿಂದ ನೇತ್ರದಾನ ಶಿಬಿರ ಹಮ್ಮಿಕೊಂಡಿದ್ದಾರೆ. ನಾನು ಕೂಡ ನನ್ನ ನೇತ್ರ ದಾನ ಮಾಡಿದ್ದೇನೆ” ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here