ಕಿರಣ್​ ಮಜುಂದಾರ್ ಶಾ ​ ಪೋಸ್ಟ್​ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

0
Spread the love

ಬೆಂಗಳೂರು: ಬಯೋಕಾನ್ ಕಂಪನಿಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಬೆಂಗಳೂರಿನ ರಸ್ತೆಗುಂಡಿಗಳು, ಕಸ ಸೇರಿದಂತೆ ಮೂಲಸೌಕರ್ಯ ಕೊರತೆ ಬಗ್ಗೆ ಮತ್ತೆ ಕಿಡಿಕಾರಿದ್ದಾರೆ. ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೇ ನೀಡಿದ್ದಾರೆ. ‘ಎಕ್ಸ್’​ ಖಾತೆಯಲ್ಲಿ ಪೊಸ್ಟ್‌ ಮಾಡಿರುವ ಅವರು,

Advertisement

ಬೆಂಗಳೂರನ್ನು ಕೆಡವುದರ ಬದಲು, ಒಟ್ಟಾಗಿ ನಿರ್ಮಿಸೋಣ. ಜಗತ್ತು ಬೆಂಗಳೂರಿನ ಮೂಲಕ ಭಾರತವನ್ನು ನೋಡುತ್ತಿದೆ. ಒಗ್ಗಟ್ಟಿನಿಂದ ಎತ್ತರಕ್ಕೇರಲು ನಮ್ಮ ಬೆಂಗಳೂರಿಗೆ ನಾವು ಋಣಿಯಾಗಿದ್ದೇವೆ. ಬೆಂಗಳೂರು ಲಕ್ಷಾಂತರ ಜನರಿಗೆ ಅವಕಾಶಗಳನ್ನ ನೀಡಿದೆ. ಅವರದ್ದೇ ಆದ ವ್ಯಕ್ತಿತ್ವ ಗುರುತಿಸಿ ಯಶಸ್ಸನ್ನು ನೀಡಿದೆ. ಬೆಂಗಳೂರು ನಿರಂತರ ಟೀಕೆಗೆ ಇರುವ ನಗರವಲ್ಲ. ಸಾಮೂಹಿಕ ಪ್ರಯತ್ನಕ್ಕೆ ಅರ್ಹವಾದ ನಗರ ಎಂದಿದ್ದಾರೆ.

ಹೌದು, ಸವಾಲುಗಳು ನಮಗೆ ಇವೆ. ನಾವು ಅವುಗಳನ್ನ ಗಮನದಲ್ಲಿಟ್ಟುಕೊಂಡು, ತುರ್ತಾಗಿ ಪರಿಹರಿಸುತ್ತಿದ್ದೇವೆ. ರಸ್ತೆ ದುರಸ್ತಿಗಾಗಿ 1,100 ಕೋಟಿ ರೂ. ಮಂಜೂರಾಗಿದೆ. 10000+ ಗುಂಡಿಗಳನ್ನು ಗುರುತಿಸಲಾಗಿದೆ. 5000ಕ್ಕೂ ಹೆಚ್ಚು ಗುಂಡಿಗಳನ್ನ ಈಗಾಗಲೇ ಆದ್ಯತೆಯ ಮೇಲೆ ಮುಚ್ಚಲಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರನ್ನು ಜಾಗತಿಕವಾಗಿ ಸ್ಪರ್ಧಾತ್ಮಕವಾಗಿ ಬೆಳೆಯಲು ಪ್ರಮುಖ ಮೂಲಸೌಕರ್ಯ ಕಾರ್ಯಗಳು ನಡೆಯುತ್ತಿವೆ. ಬೃಹತ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಪೂರ್ವ 50 ವಾರ್ಡ್‌ಗಳಲ್ಲಿ ಮೂಲಸೌಕರ್ಯವನ್ನು ನೇರವಾಗಿ ಸುಧಾರಿಸಲು ಈಗ 1,673 ಕೋಟಿ ರೂ. ಸ್ವಂತ ಆದಾಯವನ್ನು ಉಳಿಸಿಕೊಳ್ಳಲಿದೆ. ನಮ್ಮ ಐಟಿ ಕಾರಿಡಾರ್‌ಗಳಿಗೆ ನೇರವಾಗಿ ಪ್ರಯೋಜನವಾಗಲಿದೆ. ಸಿಎಸ್‌ಬಿ-ಕೆಆರ್ ಪುರಂಎಲಿವೇಟೆಡ್ ಕಾರಿಡಾರ್‌ಗಳಂತಹ ಪ್ರಮುಖ ಕಾರ್ಯಗಳು ನಡೆಯತ್ತಿವೆ. ನಾವು ನಾಗರಿಕರು, ಉದ್ಯೋಗಿಗಳು ಮತ್ತು ಕಂಪನಿಗಳಿಗೆ ಮೂಲಸೌಕರ್ಯವನ್ನು ಬಲಪಡಿಸುತ್ತಿದ್ದೇವೆ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here