ಚಿಕ್ಕಬಳ್ಳಾಪುರ:- ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ರಾಜ್ಯದ ಮುಖ್ಯಮಂತ್ರಿ ಆಗುವ ಎಲ್ಲಾ ಅರ್ಹತೆ ಇದೆ ಎಂದು ಸಚಿವ ಎಂ.ಸಿ ಸುಧಾಕರ್ ಹೇಳಿಕೆ ನೀಡಿದ್ದಾರೆ.
Advertisement
ನವೆಂಬರ್‌ನಲ್ಲಿ ಕ್ರಾಂತಿ ಚರ್ಚೆ ವಿಚಾರಕ್ಕೆ ನಗರದಲ್ಲಿ ಮಾತನಾಡಿದ ಅವರು, ಯಾವ ಕ್ರಾಂತಿಯೂ ಇಲ್ಲ ಬರೀ ಭ್ರಾಂತಿ ಅಷ್ಟೆ. ಕಾಂಗ್ರೆಸ್ ಹೈಕಮಾಂಡ್ ಪ್ರಸ್ತುತ ಬಿಹಾರ ಚುನಾವಣೆ ಕಡೆ ಗಮನ ಇದೆ. ಕ್ರಾಂತಿಯ ಬಗ್ಗೆ ನಮಗ್ಯಾರಿಗೂ ಮಾಹಿತಿ ಇಲ್ಲ. ಕಾಂಗ್ರೆಸ್ ಹೈಕಮಾಂಡ್, ಸಿಎಂ, ಡಿಸಿಎಂ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ ಎಂದರು.
ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗುವ ಇಂಗಿತದ ಬಗ್ಗೆ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಅವಕಾಶ ಇದೆ ಅಂದ್ರೆ ಯಾರಾದ್ರೂ ಬೇಡ ಅಂತಾರಾ? ಡಿಕೆಶಿಗೆ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಜೋಡೆತ್ತುಗಳಾಗಿ ಕೆಲಸ ಮಾಡಿದ್ದಾರೆ. ಹೈಕಮಾಂಡ್ ತೆಗೆದುಕೊಳ್ಳೊ ತಿರ್ಮಾನಕ್ಕೆ ನಾವು ಬದ್ಧ ಎಂದರು.


