ಬೆಂಗಳೂರು:- DCM ಡಿಕೆ ಶಿವಕುಮಾರ್ಗೆ ಅನಾರೋಗ್ಯ ಉಂಟಾಗಿ 3 ದಿನ ಸಾರ್ವಜನಿಕರ ಭೇಟಿಗೆ ಅವಕಾಶವಿಲ್ಲ ಎನ್ನಲಾಗಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಡಿಕೆಶಿ, ನಾಳೆಯಿಂದ ಮೂರು ದಿನಗಳ ಕಾಲ ಯಾರನ್ನೂ ಭೇಟಿ ಆಗಲು ಸಾಧ್ಯವಾಗುತ್ತಿಲ್ಲ. ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ವಿಷಾದಿಸುತ್ತೇನೆ. ಯಾರೂ ತಪ್ಪು ತಿಳಿಯಬಾರದು ಎಂದು ಬರೆದುಕೊಂಡಿದ್ದಾರೆ.
ಡಿಕೆ ಶಿವಕುಮಾರ್ ಅವರು ತಮ್ಮ ಅನಾರೋಗ್ಯದ ಬಗ್ಗೆ ಅಧಿಕೃತವಾಗಿ ಹೇಳಿಕೊಂಡಿಲ್ಲ. ಆದ್ರೆ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಡಿಕೆ ಶಿವಕುಮಾರ್ ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದು, ಈ ಬಗ್ಗೆ ಸುರ್ಜೆವಾಲ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದರಿಂದ ಡಿಕೆ ಶಿವಕುಮಾರ್ ಅವರು ಅನಾರೋಗ್ಯದಿಂದ ಬಳಲುತ್ತಿರುವುದು ಖಚಿತವಾಗಿದೆ.
ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆ ವೈದ್ಯರ ಸೂಚನೆ ಮೇರೆಗೆ ಡಿಕೆ ಶಿವಕುಮಾರ್ ಅವರು ಚಿಕಿತ್ಸೆ ಹಾಗೂ ವಿಶ್ರಾಂತಿಗೆ ಮುಂದಾಗಿದ್ದಾರೆ. ಇದರಿಂದ ಮೂರು ದಿನಗಳ ಕಾಲ ಡಿಕೆ ಶಿವಕುಮಾರ್ ಯಾವುದೇ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸುತ್ತಿಲ್ಲ ಎನ್ನಲಾಗಿದೆ.



