ಮಂಗಳೂರು:– ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿಗಳಾಗಿರುವ ಡಿಕೆ ಶಿವಕುಮಾರ್ ಅವರು ಇಂದು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಮಂಜುನಾಥನ ದರ್ಶನ ಪಡೆದು, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.
ಧರ್ಮಸ್ಥಳದಲ್ಲಿ ಒಂದು ಸುತ್ತು ದೇವಸ್ಥಾನ ಪ್ರದಕ್ಷಿಣೆ ಹಾಕಿ, ಮಂಜುನಾಥಸ್ವಾಮಿಯ ದರ್ಶನ ಪಡೆದು ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಂಜುನಾಥನ ದರ್ಶನದ ಬಳಿಕ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರನ್ನ ಭೇಟಿಯಾಗಿದ್ದು, ಅವರ ಕಾಲಿಗೆ ಬಿದ್ದು ಆಶೀರ್ವಾದ ಸಹ ಪಡೆದಿದ್ದಾರೆ. ಬಳಿಕ ಕೆಲ ಕಾಲ ಗೌಪ್ಯ ಮಾತುಕತೆ ನಡೆಸಿದ್ದಾರೆ.
ಇನ್ನೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮಯ ಸಿಕ್ಕಾಗೆಲ್ಲಾ ದೇಗುಲಗಳಿಗೆ ಭೇಟಿ ನೀಡುತ್ತಲೇ ಇರುತ್ತಾರೆ. ಕಳೆದ ವಾರವಷ್ಟೇ ಘಾಟಿ ಸುಬ್ರಮಣ್ಯ ಸ್ವಾಮಿ ದರ್ಶನ ಪಡೆದಿದ್ದರು.



