ಬೆಂಗಳೂರು:- ಡಿಕೆಶಿ ಅವರು ಅಫಿಡವಿಟ್‌ನಲ್ಲಿ ದುಬಾರಿ ವಾಚ್ ಬಗ್ಗೆ ತಿಳಿಸಿಲ್ಲ ಎಂಬ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ನಾರಾಯಣಸ್ವಾಮಿ ಅವರ ಹೇಳಿಕೆಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
Advertisement
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಾನು ನಾರಾಯಣಸ್ವಾಮಿ ಅವರ ಮನೆಯಿಂದಲೇ ವಾಚ್ ಕದ್ದಿದ್ದೇನೆ ಎಂದು ಲೇವಡಿ ಮಾಡಿದರು. ನನ್ನ ಬಳಿ ಇರುವ ದುಬಾರಿ ವಾಚ್‌ಗಳ ಬಗ್ಗೆ ನಾನು ಎಲ್ಲವನ್ನೂ ಪಾರದರ್ಶಕವಾಗಿ ಹೇಳಿದ್ದೇನೆ. ಆ ವಾಚ್ ಖರೀದಿ ಬಗ್ಗೆ ನನಗೆ ಗೊತ್ತು, ಬಿಜೆಪಿಯವರಿಗೇನು ಗೊತ್ತು ಎಂದು ಪ್ರಶ್ನಿಸಿದರು.
ಕಾಸು ಕೊಟ್ಟಿರುವುದು ನಾನು. ಕ್ರೆಡಿಟ್ ಕಾರ್ಡ್ ಬಳಸಿರೋದು ನಾನು. ನಾನು ಎಲ್ಲವನ್ನೂ ಪಾರದರ್ಶಕವಾಗಿ ಹೇಳಿದ್ದೇನೆ. ನನ್ನ ಬಳಿ ರೋಲೆಕ್ಸ್ ವಾಚ್ ಇರುವುದನ್ನೂ ಹೇಳಿದ್ದೇನೆ. ನಾರಾಯಣಸ್ವಾಮಿಯಿಂದ ಕಲಿಯುವುದೇನಿಲ್ಲ ಎಂದು ಹೇಳಿದರು.


