HomePolitics Newsಬೌರಿಂಗ್ ಆಸ್ಪತ್ರೆ ದುರಂತಕ್ಕೆ ಡಿಸಿಎಂ ಆಘಾತ: ಇಂತಹ ಘಟನೆ ಆಗಬಾರದಿತ್ತು ಎಂದ ಡಿ.ಕೆ. ಶಿವಕುಮಾರ್!

ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಡಿಸಿಎಂ ಆಘಾತ: ಇಂತಹ ಘಟನೆ ಆಗಬಾರದಿತ್ತು ಎಂದ ಡಿ.ಕೆ. ಶಿವಕುಮಾರ್!

For Dai;y Updates Join Our whatsapp Group

Spread the love

ಬೆಂಗಳೂರು: ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವನ್ನಪ್ಪಿರುವ ಘಟನೆ ಅತ್ಯಂತ ದುಃಖಕರವಾಗಿದ್ದು, ಇಂತಹ ದುರಂತ ಸಂಭವಿಸಬಾರದಿತ್ತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೃತರಲ್ಲಿ ನಾಲ್ವರು ಬೀದಿ ಬದಿ ವ್ಯಾಪಾರಿಗಳು, ಇಬ್ಬರು ಕೇರಳ ಮೂಲದವರು ಹಾಗೂ ಒಂದು ಮಗು ಸೇರಿದೆ. ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ. ಕೇರಳದ “ಕುಟುಂಬಶ್ರೀ” ಸಂಸ್ಥೆಯ ಮೂಲಕ 56 ಮಂದಿ ಪ್ರವಾಸಕ್ಕೆ ಬೆಂಗಳೂರಿಗೆ ಬಂದಿದ್ದು, ಕಮರ್ಷಿಯಲ್ ಸ್ಟ್ರೀಟ್‌ನಲ್ಲಿ ಶಾಪಿಂಗ್ ಮಾಡುವ ವೇಳೆ ಮಳೆ ಆರಂಭವಾಗಿತ್ತು. ಮಳೆಯಿಂದ ರಕ್ಷಣೆ ಪಡೆಯಲು ಗೋಡೆ ಪಕ್ಕ ನಿಂತಿದ್ದಾಗ ಸುಮಾರು 8 ಅಡಿ ಎತ್ತರದ ಗೋಡೆ ಕುಸಿದು ಈ ದುರಂತ ಸಂಭವಿಸಿದೆ ಎಂದು ವಿವರಿಸಿದರು.

ಮರಗಳು ಮತ್ತು ಕೊಂಬೆಗಳು ಬಿದ್ದು ವಾಹನಗಳಿಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ, ನಗರದಲ್ಲಿ ಅಪಾಯಕಾರಿಯಾದ ಮರಗಳು ಮತ್ತು ದುರ್ಬಲ ಕೊಂಬೆಗಳನ್ನು ತಕ್ಷಣ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು. ನೂರಕ್ಕೂ ಹೆಚ್ಚು ಕಡೆಗಳಲ್ಲಿ ಮರ ಬಿದ್ದಿರುವುದು ಗಮನಕ್ಕೆ ಬಂದಿದ್ದು, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಮೃತರ ಕುಟುಂಬಗಳಿಗೆ ಸರ್ಕಾರ ಪರಿಹಾರ ಘೋಷಿಸಿದ್ದು, ಕೇರಳ ಸರ್ಕಾರಕ್ಕೂ ಮಾಹಿತಿ ನೀಡಲಾಗುವುದು. ಮೃತದೇಹಗಳನ್ನು ಗೌರವಯುತವಾಗಿ ಸಾಗಿಸಲು ವ್ಯವಸ್ಥೆ ಮಾಡಲಾಗುತ್ತದೆ. ಗಾಯಗೊಂಡವರಲ್ಲಿ ಕೆಲವರು ಚೇತರಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ವಿಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿದ ಅವರು, “ಇದು ಆರೋಪ ಮಾಡುವ ಸಮಯವಲ್ಲ, ಸಮಸ್ಯೆಗೆ ಪರಿಹಾರ ಕಂಡುಹಿಡಿಯುವುದು ಮುಖ್ಯ. ಹಳೆಯ ಗೋಡೆಯ ನಿರ್ವಹಣೆಯಲ್ಲಿ ಕೊರತೆ ಇದ್ದುದರಿಂದ ಈ ಘಟನೆ ಸಂಭವಿಸಿರುವ ಸಾಧ್ಯತೆ ಇದೆ ಎಂದು ಹೇಳಿ, ತನಿಖೆಗೆ ಆದೇಶಿಸಲಾಗಿದೆ ಎಂದರು.

ಮುಂದೆ ಇಂತಹ ಅನಾಹುತಗಳು ಸಂಭವಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಡಿಸಿಎಂ ಸ್ಪಷ್ಟಪಡಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!