HomeChamarajanagarಕೊತ್ತಲವಾಡಿ ಸಮೀಪ ಎರಡು ಹುಲಿಗಳ ಕಳೇಬರ ಪತ್ತೆ

ಕೊತ್ತಲವಾಡಿ ಸಮೀಪ ಎರಡು ಹುಲಿಗಳ ಕಳೇಬರ ಪತ್ತೆ

For Dai;y Updates Join Our whatsapp Group

Spread the love

ಚಾಮರಾಜನಗರ: ತಾಲೂಕಿನ ಕೊತ್ತಲವಾಡಿ ಸಮೀಪದ ಮೇಲೂರು ಗ್ರಾಮದ ಕರಿಕಲ್ಲು ಕ್ವಾರಿ ಬಳಿಯ ಪಾಳು ಬಿದ್ದಿರುವ ಜಮೀನಿನಲ್ಲಿ  ಎರಡು ಹುಲಿಗಳ ಕಳೇಬರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮೇಲೂರು-ತೆರಕಣಾಂಬಿ ಗ್ರಾಮಗಳ ಗಡಿಭಾಗದಲ್ಲಿರುವ ಮೇಲೂರು ಗ್ರಾಮದ ಸ.ನಂ ೧೦೭ರ ಪಾಳು ಬಿದ್ದಿರುವ ಜಮೀನಿನ ಎರಡು ಕಡೆ ಒಂದು ವಯಸ್ಕ ಹಾಗೂ ಮರಿ ಹುಲಿಗಳ ಕಳೇಬರ ಪತ್ತೆಯಾಗಿದ್ದು ಕಳೆದ ೨೦ ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಶುಕ್ರವಾರ ಮಧ್ಯಾಹ್ನದ ವೇಳೆಗೆ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಬನ್ನೇರುಘಟ್ಟ ಜೈವಿಕ ಉದ್ಯಾನ ಸಲಹೆಗಾರ ಡಾ.‌ಮಂಜುನಾಥ್ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕಳೇಬರವನ್ನು ಸ್ಥಳದಲ್ಲಿಯೇ ಅರಣ್ಯ ಇಲಾಖೆಯ ನಿಯಮದಂತೆ ಸುಡಲಾಯಿತು. ಜಾನುವಾರುಗಳನ್ನು ಮೇಯಿಸುವ ವೇಳೆಯಲ್ಲಿ ಪೊದೆಯ ಕಡೆಯಿಂದ ವಾಸನೆ ಬರುತ್ತಿದ್ದು ಹೋಗಿ ನೋಡಿದಾಗ ಹುಲಿಗಳು ಕೊಳೆತ ಸ್ಥಿತಿಯಲ್ಲಿರುವುದು ಕಂಡುಬಂದಿದೆ. ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು ಸ್ಥಳಕ್ಕೆ ಚಾಮರಾಜನಗರ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ,

ಚಾಮರಾಜನಗರ ಪ್ರಾದೇಶಿಕ ವಲಯದ ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದು ಸ್ಥಳದಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಶ್ವಾನದಳದೊಂದಿಗೆ ಪೊಲೀಸರು, ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಎರಡು ಹುಲಿಗಳ ಕಳೇಬರ ಇನ್ನೂರು ಮೀಟರ್ ದೂರದಲ್ಲಿ ಪ್ರತ್ಯೇಕವಾಗಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಹುಲಿಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ, ವಿಷಪ್ರಾಶನವಾಗಿರುವ ಜಾನುವಾರುಗಳನ್ನು ತಿಂದು ಹುಲಿಗಳು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಳಿಕ ಸಾವಿಗೆ ಸ್ಪಷ್ಟ ಕಾರಣ ತಿಳಿಯಲಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!