ಬೆಂಗಳೂರು:- ಬೀದಿ ನಾಯಿಗಳ ದಾಳಿಗೆ ಒಳಗಾದ 60 ವರ್ಷದ ವೃದ್ಧ ಮಹಿಳೆ ಸಾವನ್ನಪ್ಪಿದ ಘಟನೆ ಜಾಲಹಳ್ಳಿ ಏರ್ಫೋರ್ಸ್ ಕ್ಯಾಂಪಸ್‌ನಲ್ಲಿ ಜರುಗಿದೆ.
Advertisement
60 ವರ್ಷದ ಮಹಿಳೆ ಕ್ಯಾಂಪಸ್‌ನಲ್ಲಿ ವಾಕ್ ಮಾಡುತ್ತಿದ್ದ ಸಂದರ್ಭ ಏಳೆಂಟು ಬೀದಿ ನಾಯಿಗಳು ಅವರ ಮೇಲೆ ಎರಗಿ ದಾಳಿ ನಡೆಸಿವೆ. ಘಟನೆಯ ಪರಿಣಾಮ ಮಹಿಳೆಯ ತಲೆ ಹಿಂಭಾಗ, ಮುಖ, ಕೈ ಹಾಗೂ ಕತ್ತಿನ ಭಾಗ ಛಿದ್ರ ಛಿದ್ರಗೊಂಡಿದೆ.
ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮಹಿಳೆ ಮೃತಪಟ್ಟಿದ್ದಾರೆ. ಮೃತ ಮಹಿಳೆಯ ಅಳಿಯ ಏರ್ಫೋರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅಳಿಯ-ಮಗಳನ್ನ ಭೇಟಿಯಾಗಲು ಮಹಿಳೆ ಬಿಹಾರದಿಂದ ಬೆಂಗಳೂರಿಗೆ ಬಂದಿದ್ದರು. ಇಂದು ಬೆಳಗ್ಗೆ ವಾಕ್ ಮಾಡುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.


