ಆನೇಕಲ್: ಸಾರ್ವಜನಿಕ ರಸ್ತೆಯಲ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಾ ಕೆಲ ಯುವಕರು ಅಪಾಯಕಾರಿ ರೀತಿಯಲ್ಲಿ ವರ್ತಿಸಿರುವ ಘಟನೆ ಆನೇಕಲ್-ಜಿಗಣಿ ರಸ್ತೆಯ ಕುಂಬಾರನಹಳ್ಳಿ ಬಳಿ ನಡೆದಿದೆ.
ಹೋಂಡಾ ಆಕ್ಟಿವಾ ಹಾಗೂ ಸುಜುಕಿ ಆಕ್ಸೆಸ್ ಬೈಕ್ಗಳಲ್ಲಿ ಬಂದಿದ್ದ ಯುವಕರು ರಸ್ತೆಯಲ್ಲೇ ವ್ಹೀಲಿಂಗ್ ಮಾಡಿದ್ದಾರೆ. ಎರಡು ಬೈಕ್ಗಳಲ್ಲಿ ಬಂದಿದ್ದವರು ರಸ್ತೆಯಲ್ಲಿ ಅಪಾಯಕಾರಿ ಸಾಹಸ ಪ್ರದರ್ಶಿಸುತ್ತಾ ಇತರ ವಾಹನ ಸವಾರರಿಗೆ ತೊಂದರೆ ನೀಡಿದ್ದಾರೆ ಎನ್ನಲಾಗಿದೆ.
ಯುವಕರ ಈ ಹುಚ್ಚಾಟದಿಂದ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಕಿರಿಕಿರಿ ಅನುಭವಿಸಿದ್ದಾರೆ. ಸಾರ್ವಜನಿಕರ ಸುರಕ್ಷತೆಯನ್ನು ಲೆಕ್ಕಿಸದೆ ವ್ಹೀಲಿಂಗ್ ಮಾಡಿರುವ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಾರ್ವಜನಿಕ ರಸ್ತೆಯಲ್ಲಿ ಅಪಾಯಕಾರಿ ವ್ಹೀಲಿಂಗ್ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.










