ಕಾಸರಗೋಡು:- ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಗ್ರಾಮದಲ್ಲಿ ಪಿಸ್ತಾ ಸಿಪ್ಪೆ ನುಂಗಿ 2 ವರ್ಷದ ಬಾಲಕ ದುರಂತ ಸಾವು ಕಂಡಿರುವ ಘಟನೆ ಜರುಗಿದೆ.
Advertisement
ಮೃತ ಬಾಲಕನನ್ನು ಅನಸ್ ಎಂದು ಗುರುತಿಸಲಾಗಿದೆ. ಶನಿವಾರ ಅನ್ವರ್ ಹಾಗೂ ಮೆಹರೂಫ ಎಂಬುವರ ಮಗ ಅನಸ್ ಪಿಸ್ತಾ ಸಿಪ್ಪೆ ನುಂಗಿದ್ದ. ತಕ್ಷಣ ಪೋಷಕರು, ಸಿಪ್ಪೆಯ ಒಂದು ಭಾಗ ಹೊರ ತೆಗೆದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಮಗುವಿನ ತಪಾಸಣೆ ಮಾಡಿದ ವೈದ್ಯರು, ಗಂಟಲಿನಲ್ಲಿ ಏನು ಸಿಕ್ಕಿ ಹಾಕಿಕೊಂಡಿಲ್ಲ ಎಂದು ಹೇಳಿದ್ದರು.
ಆದ್ರೆ, ಮರುದಿನ ಅಂದರೆ ನಿನ್ನೆ ಭಾನುವಾರ ಮಗುವಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಇದರಿಂದ ಭಯಗೊಂಡ ಪೋಷಕರು ಮತ್ತೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದ್ರೆ ಶ್ವಾಸಕೋಶದಲ್ಲಿ ಸಿಪ್ಪೆ ಸಿಲುಕಿಕೊಂಡು ಉಸಿರಾಟದ ತೊಂದರೆಯಾಗಿ ಮಗು ಕೊನೆಯುಸಿರೆಳೆದಿದೆ.