ಬಾಣಂತಿಯರ ಸರಣಿ ಸಾವು ಕೇಸ್: ಐವಿ ಫ್ಲೂಯಿಡ್ ವರದಿಯಲ್ಲಿ ಶಾಕಿಂಗ್ ನ್ಯೂಸ್ ಬಹಿರಂಗ!

0
Spread the love

ಬೆಂಗಳೂರು:-ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಬಾರೀ ಸದ್ದು ಮಾಡುತ್ತಿದ್ದು, ಸರ್ಕಾರ ಕೂಡ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದೆ.

Advertisement

ಇನ್ನೂ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಐವಿ ಫ್ಲೂಯಿಡ್ ರಿಪೋರ್ಟ್​ನಲ್ಲಿ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.  ಅದರಲ್ಲಿ ಫಂಗಸ್ ಸೇರಿದ್ದಂತೆ ಬ್ಯಾಕ್ಟೀರಿಯಾ ಅಂಶ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಅವರು ಈ ಬಗ್ಗೆ ಸಂಪೂರ್ಣ ವಿವರಣೆ ಕೇಳಿ ಕೇಂದ್ರದ ಡ್ರಗ್ ಕಂಟ್ರೋಲ್ ಇಲಾಖೆಗೆ ಆರೋಗ್ಯ ಇಲಾಖೆಗೆ ಪತ್ರ ಬರೆದಿದ್ದಾರೆ.

ಪಶ್ಚಿಮ ಬಂಗಾಳದ ಕಂಪನಿ ಬರೋಬ್ಬರಿ 192 ಬ್ಯಾಚ್​ಗಳಲ್ಲಿ ಔಷಧಿ ಕಳಿಸಿತ್ತು. ಬಳಕೆ ಮಾಡುವುದಕ್ಕೆ ಶುರು ಮಾಡಿದ ಆರಂಭದಲ್ಲೇ ಐವಿ ರಿಂಗರ್ ಲ್ಯಾಕ್ಟೇಟ್ ಬಗ್ಗೆ ಶಂಕೆ ಎದ್ದಿತ್ತು. ಬಳಿಕ 22 ಬ್ಯಾಚ್​ಗಳು ಉತ್ತಮ ಗುಣಮಟ್ಟ ಹೊಂದಿಲ್ಲವೆಂಬ ವರದಿ ಹೊರಬಿದ್ದಿತ್ತು. ಖುದ್ದು ರಾಜ್ಯದ ಡ್ರಗ್ ಕಂಟ್ರೋಲ್ ಐವಿ ರಿಂಗರ್ ಲ್ಯಾಕ್ಟೇಟ್ ಗುಣಮಟ್ಟ ಉತ್ತಮವಾಗಿಲ್ಲ ಅನ್ನೋ ರಿಪೋರ್ಟ್ ಕೊಟ್ಟಿತ್ತು.

ನಂತರ ಐವಿ ರಿಂಗ್ ಬಳಸಬೇಡಿ ಎಂದು ತಡೆಹಿಡಿದು ಎಲ್ಲ ಆಸ್ಪತ್ರೆಗಳಿಗೂ ಸುತ್ತೋಲೆ ಹೊರಡಿಸಿತ್ತು. ಪಶ್ಚಿಮ ಬಂಗಾಳದಿಂದ ಬಂದಿದ್ದ ಅಷ್ಟು ಬ್ಯಾಚ್​ಗಳಿಗೆ ಬ್ರೇಕ್ ಹಾಕಿ, ಬಳಿಕ ಬ್ಲಾಕ್ ಲಿಸ್ಟ್​ಗೆ ಸೇರಿಸಿತ್ತು. ಆದ್ರೆ ಕೇಂದ್ರ ಡ್ರಗ್ ಲ್ಯಾಬ್​ನಲ್ಲಿ ಇದೇ ಔಷಧಿಯ 22 ಬ್ಯಾಚ್​ಗಳು ಪಾಸ್ ಆಗಿವೆ ಎನ್ನಲಾಗಿದೆ.

ಕೇಂದ್ರ ಡ್ರಗ್ ಲ್ಯಾಬ್ ನೀಡಿದ್ದ ಪಾಸಿಟಿವ್ ವರದಿಯನ್ನೇ ಪಶ್ಚಿಮ ಬಂಗಾಳದ ಕಂಪನಿ ರಾಜ್ಯದ ಔಷಧಿ ನಿಗಮದ ಮುಂದಿಟ್ಟಿತ್ತು. ನಿಯಮಗಳ ಪ್ರಕಾರ ಸೆಂಟ್ರಲ್ ಡ್ರಗ್ ಲ್ಯಾಬ್​ನಲ್ಲಿ ವರದಿ ಅಂತಿಮ. ಹೀಗಾಗಿ ಟೆಂಡರ್ ರೂಲ್ಸ್ ಪ್ರಕಾರ ಕಂಪನಿಯ ದ್ರಾವಣ ನಿರಾಕರಿಸುವಂತಿಲ್ವಂತೆ. ಈಗಾಗಲೇ ಪಶ್ಚಿಮ ಬಂಗಾಳದಲ್ಲಿರುವ ಕೇಂದ್ರದ ಲ್ಯಾಬ್​ಗೆ ಸ್ಯಾಂಪಲ್ಸ್​ ರವಾನೆ ಮಾಡಲಾಗಿದ್ದು, ಅದರ ವರದಿ ಡಿಸೆಂಬರ್ 9ರಂದು ಬರಲಿದೆ.

ಇನ್ನೂ ವಿಮ್ಸ್ ಆಸ್ಪತ್ರೆಯಲ್ಲಿ ಒಬ್ಬರು, ಬಳ್ಳಾರಿಯ ಬಿಮ್ಸ್​ನಲ್ಲಿ ನಾಲ್ವರು ಬಾಣಂತಿಯರ ಸಾವು ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಐವರು ಬಾಣಂತಿಯರ ಸಾವಿಗೆ ಕೇಂದ್ರವೇ ಕಾರಣ ಅಂತ ಬೆರಳು ತೋರಿಸ್ತಿದ್ದಾರೆ. ಕೇಂದ್ರದ ವರದಿಯ ಕಳ್ಳಾಟದಿಂದಲೇ ಮಾರಣ ಹೋಮ ನಡೀತಾ ಎನ್ನುವ ಅನುಮಾನ ಸೃಷ್ಟಿಯಾಗಿದೆ. ಇದರ ಮಧ್ಯ ಇದೀಗ 92 ಐವಿ ಫ್ಲೂಯಿಡ್ ಸ್ಯಾಂಪಲ್ಸ್​​ ರಿಪೋರ್ಟ್ ಬಂದಿದ್ದು, ವರದಿಯಲ್ಲಿ ಶಾಕಿಂಗ್​ ಅಂಶ ಕಂಡುಬಂದಿದೆ.


Spread the love

LEAVE A REPLY

Please enter your comment!
Please enter your name here