ಮಂಡ್ಯ:- ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಮಂಡ್ಯ ಮಿಮ್ಸ್ ಆಸ್ಪತ್ರೆಯ ವಸತಿ ನಿಲಯದಲ್ಲಿ ಜರುಗಿದೆ.
Advertisement
ಈ ಮೂಲಕ ವಿಮ್ಸ್ ನಲ್ಲಿ ವಿದ್ಯಾರ್ಥಿಗಳ ಸಾವು ಪ್ರಕರಣಗಳ ಸಂಖ್ಯೆ ಮುಂದುವರಿದಿದೆ. ಮೃತ ವಿದ್ಯಾರ್ಥಿನಿಯನ್ನು ನಿಷ್ಕಲ ಎಂದು ಗುರುತಿಸಲಾಗಿದೆ. ನಿಷ್ಕಲ, ಮಿಮ್ಸ್ ನಲ್ಲಿ ಅಂತಿಮ ವರ್ಷದ ಬಿಎಸ್ಸಿ ವ್ಯಾಸಂಗ ಮಾಡ್ತಿದ್ದರು. ನಿಷ್ಕಲ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಮಂಡ್ಯ ಈಸ್ಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಇನ್ನೂ ಕಳೆದ ಜುಲೈ 21 ರಂದು ಇದೆ ಮಿಮ್ಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಭರತ್ ಯತ್ತಿನಮನೆ ಆತ್ಮಹತ್ಯೆಗೆ ಶರಣಾಗಿದ್ದ. ಭರತ್ ಸಾವು ಮಾಸುವ ಮುನ್ನವೇ ಈಗ ನಿಷ್ಕಲ ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ.