ಶ್ರೀ ವೇಮನ ಜಯಂತಿ ಅದ್ಧೂರಿ ಆಚರಣೆಗೆ ನಿರ್ಧಾರ

0
Spread the love

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಪ್ರತಿ ವರ್ಷದಂತೆ ಈ ವರ್ಷವೂ ಜನವರಿ 19ರಂದು ಶ್ರೀ ಮಹಾಯೋಗಿ ವೇಮನ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುವುದು ಎಂದು ಹುಬ್ಬಳ್ಳಿ ಶಹರ ತಹಸೀಲ್ದಾರ ಕಲಗೌಡ ಪಾಟೀಲ ಹೇಳಿದರು.

Advertisement

ಬುಧವಾರ ತಾಲೂಕು ಆಡಳಿತಸೌಧದ ತಾಲೂಕು ಪಂಚಾಯತ ಸಭಾಭವನದಲ್ಲಿ ಶ್ರೀ ಮಹಾಯೋಗಿ ವೇಮನ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಅಂದು ಶ್ರೀ ಮಹಾಯೋಗಿ ವೇಮನ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಅರ್ಪಿಸಿ, ಪೂಜೆ ಸಲ್ಲಿಸಲಾಗುವುದು. ಅಲ್ಲದೇ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ ಎಂದರು.

ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ ಜಿ.ಬಿ. ಮಜ್ಜಗಿ ಮಾತನಾಡಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಮುಖಂಡರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶ್ವಸಿಗೊಳಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಸಹಾಯಕ ಕೃಷಿ ಅಧಿಕಾರಿ ಮಂಜುಳಾ ತೆಂಬದ, ಕೃಷಿ ಅಧಿಕಾರಿ ಮಂಜುಳಾ ಸುರಗೊಂಡ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆತೀಕಾ ಸಿದ್ದಿ, ಕಂದಾಯ ನಿರೀಕ್ಷಕರಾದ ಬಿ.ಕೆ. ಸಂಶಿ, ಈರಣಗೌಡ ಐಯನಗೌಡರ, ಸಮಾಜದ ಮುಖಂಡರಾದ ರಮೇಶ ಕಾಲವಾಡ, ಪ್ರಕಾಶ ಎಚ್., ಉದಯ ಹೊಸಮನಿ, ರಘುನಾಥಗೌಡ ಕೆಂಪಲಿAಗನಗೌಡ, ಬಸವರಾಜ ಕಳಕರೆಡ್ಡಿ, ಮೋಹನ ಹೊಸಮನಿ, ಎ.ಎಸ್. ಅಂಗಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here