ಬೆಂಗಳೂರು: ಯಾದಗಿರಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪದ ಪಿಎಸ್‌ಐ ಪರಶುರಾಮ ಅವರು ಇದೀಗ ಮಣ್ಣಲ್ಲಿ ಮಣ್ಣಾಗಿದ್ದಾರೆ. ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಾಳ ಸ್ವಗ್ರಾಮದಲ್ಲಿ ಕುಟುಂಬಕ್ಕೆ ಸೇರಿದ ಜಮೀನಿನಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದೆ. ಇನ್ನೂ ಮೃತ ಪಿಎಸ್‌ಐ ಪರಶುರಾಮ್ಪತ್ನಿಗೆ ಸರ್ಕಾರಿ ಇಲಾಖೆಯಲ್ಲಿ ಕೆಲಸ, ಪರಿಹಾರ ಕೊಡೋದಕ್ಕೆ ಸರ್ಕಾರ ತೀರ್ಮಾನ ಮಾಡಿದೆ ಎಂದು ಗೃಹಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಪಿಎಸ್‌ಐ ಪರಶುರಾಮ್ ನಿಗೂಢ ಸಾವು ಪ್ರಕರಣದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಲ್ಲಿನ ಆಡಳಿತ ಪಕ್ಷದ ಶಾಸಕ ಮೇಲೆ ಆಪಾದನೆ ಮಾಡಿದ್ದಾರೆ. ಸಿಐಡಿ ತನಿಖೆಗೆ ಪ್ರಕರಣವನ್ನು ಕೊಟ್ಟಿದ್ದೇವೆ, ತನಿಖೆ ನಡೆಯುತ್ತಿದೆ. ಇದು ಆತ್ಮಹತ್ಯೆ ಅಲ್ಲ, ಅಂತ ಇಲಾಖೆ ಹೇಳಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸಾವಿಗೆ ಕಾರಣ ಗೊತ್ತಾಗುತ್ತೆ. ಪರಶುರಾಮ್ ಪತ್ನಿಗೆ ಇಲಾಖೆಯಲ್ಲಿ ಕೆಲಸ, ಪರಿಹಾರ ಕೊಡೋಕೆ ಸರ್ಕಾರ ತೀರ್ಮಾನ ಸರ್ಕಾರ ಮಾಡಿದೆ ಎಂದು ತಿಳಿಸಿದ್ದಾರೆ.