ವಿಜಯಸಾಕ್ಷಿ ಸುದ್ದಿ, ಗದಗ: ಈ ವರ್ಷದ ಸುರಿದ ಭಾರೀ ಮಳೆಗೆ ಉತ್ತರ ಕರ್ನಾಟಕದ ರೈತರು ಬೆಳೆಹಾನಿಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ರಾಜ್ಯ ಸರ್ಕಾರ ಇದುವರೆಗೂ ಬೆಳೆ ಪರಿಹಾರ ನೀಡಿಲ್ಲ. ಗದಗ ಜಿಲ್ಲೆಯಲ್ಲಿ ಹೆಸರು ಬೆಳೆ ಸಂಪೂರ್ಣವಾಗಿ ಹಾನಿಯಾಗಿದ್ದು, ಈರುಳ್ಳಿ, ಮೆಕ್ಕೆಜೋಳದ ಬೆಲೆ ಕುಸಿತವಾಗಿ ರೈತರಿಗೆ ದಿಕ್ಕು ತೋಚದಂತಾಗಿದೆ. ಸರ್ಕಾರ ರಾಜ್ಯದ ರೈತರನ್ನು ಕಡೆಗಣಿಸದೆ ನೆರವಿಗೆ ಧಾವಿಸಬೇಕು ಎಂದು ಜೆಡಿಎಸ್ ಪಕ್ಷದ ಗದಗ ಜಿಲ್ಲಾ ಯುವ ಘಟಕದ ಅಧ್ಯಕ್ಷ ದೇವಪ್ಪ ಮಲ್ಲಸಮುದ್ರ ಒತ್ತಾಯಿಸಿದ್ದಾರೆ.
ರಾಜ್ಯಾದ್ಯಾಂತ ರೈತರ ಸಂಘಟನೆಗಳು, ಜೆಡಿಎಸ್ ಪಕ್ಷ ರೈತರಿಗೆ ಪರಿಹಾರ ಆಗ್ರಹಿಸಿ ಅನೇಕ ಬಾರಿ ಮನವಿ ಸಲ್ಲಿಸಿದರೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಈಗಲಾದರೂ ಸರ್ಕಾರ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಿ ರೈತರ ಬೆಳೆಗಳಿಗೆ ಯೋಗ್ಯ ಬೆಲೆ ನೀಡಬೇಕು ಎಂದು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.



