ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲರು ಜಿಲ್ಲಾಡಳಿತ ಭವನದ ಹಿಂಬಾಗದಲ್ಲಿ ನಿರ್ಮಿಸಲಾದ ವಸತಿಗೃಹಗಳನ್ನು ಲೋಕಾರ್ಪಣೆಗೊಳಿಸಿದರು.
Advertisement
2021-22ನೇ ಸಾಲಿನ ಜಿಲ್ಲಾ ಪಂಚಾಯತ ಕಚೇರಿ ಕಟ್ಟಡಗಳ ನಿರ್ಮಾಣ ಮತ್ತು ನಿರ್ವಹಣೆ ಯೋಜನೆಯಡಿ ಗ್ರೂಪ್ ಸಿ, ಡಿ ನೌಕರರಿಗೆ 1800 ಚದರ ಮೀಟರ್ ವಿಸ್ತೀರ್ಣದಲ್ಲಿ ಒಟ್ಟು 86 ಲಕ್ಷ ರೂ ವೆಚ್ಚದಲ್ಲಿ ಸುಸಜ್ಜಿತ 4 ಗೃಹಗಳು ನಿರ್ಮಿತಿ ಕೇಂದ್ರದಿಂದ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೋರಟ್ಟಿ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾ ಪಂಚಾಯತ ಸಿಇಓ ಭರತ್ ಎಸ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಮುಂತಾದವರು ಹಾಜರಿದ್ದರು.