HomeGadag Newsಸೇವಾ ನಿಷ್ಠೆಯೇ ಜನರ ವಿಶ್ವಾಸದ ಅಡಿಪಾಯ: ತಹಸೀಲ್ದಾರ್ ಕೆ. ರಾಘವೇಂದ್ರ ರಾವ್

ಸೇವಾ ನಿಷ್ಠೆಯೇ ಜನರ ವಿಶ್ವಾಸದ ಅಡಿಪಾಯ: ತಹಸೀಲ್ದಾರ್ ಕೆ. ರಾಘವೇಂದ್ರ ರಾವ್

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಕಂದಾಯ ಇಲಾಖೆಯ ಸಿಬ್ಬಂದಿ ಪ್ರಾಮಾಣಿಕತೆ, ವಿಶ್ವಾಸಾರ್ಹತೆ ಹಾಗೂ ಸೇವಾ ಮನೋಭಾವದಿಂದ ಸಾರ್ವಜನಿಕರಿಗೆ ಸ್ಪಂದಿಸಿ, ಸರ್ಕಾರದ ಸೇವೆಗಳನ್ನು ಪರಿಣಾಮಕಾರಿಯಾಗಿ ತಲುಪಿಸುವ ಮೂಲಕ ಜನರ ವಿಶ್ವಾಸ ಗಳಿಸಬೇಕು ಎಂದು ತಹಸೀಲ್ದಾರ್ ಕೆ. ರಾಘವೇಂದ್ರ ರಾವ್ ಹೇಳಿದರು.

ಬುಧವಾರ ಶಿರಹಟ್ಟಿಯ ತಹಸೀಲ್ದಾರ್ ಕಚೇರಿಯಲ್ಲಿ ಕಂದಾಯ ಇಲಾಖೆ, ವೈದ್ಯರ ಹಾಗೂ ಪತ್ರಕರ್ತರ ದಿನಾಚರಣೆ ಅಂಗವಾಗಿ ಸಸಿ ನೆಟ್ಟು ಬಳಿಕ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಂದಾಯ ಇಲಾಖೆಯಲ್ಲಿ ತಂತ್ರಜ್ಞಾನದ ಅಳವಡಿಕೆ, ಆನ್‌ಲೈನ್ ಸೇವೆಗಳ ವಿಸ್ತರಣೆ, ಭೂ ದಾಖಲೆಗಳ ಡಿಜಿಟಲೀಕರಣ, ಸೇವೆಗಳ ಸರಳೀಕರಣ ಹಾಗೂ ಪಾರದರ್ಶಕ ಆಡಳಿತಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಇದರಿಂದ ಸಾರ್ವಜನಿಕರಿಗೆ ತ್ವರಿತ ಹಾಗೂ ಸುಲಭ ಸೇವೆ ಒದಗಿಸಲು ಸಾಧ್ಯವಾಗುತ್ತಿದ್ದು, ಇಲಾಖೆ ಇನ್ನಷ್ಟು ಜನಸ್ನೇಹಿಯಾಗಲಿದೆ ಎಂದು ತಿಳಿಸಿದರು.

ವೈದ್ಯರ ಸೇವೆ ದೇವರ ಸೇವೆಗೆ ಸಮಾನವಾಗಿದ್ದು, ರೋಗಿಗಳ ನೋವು ನಿವಾರಿಸಿ ಜೀವ ಉಳಿಸುವ ಪವಿತ್ರ ಕಾರ್ಯವನ್ನು ಅವರು ಹಗಲು-ರಾತ್ರಿ ಎನ್ನದೆ ನಿರ್ವಹಿಸುತ್ತಿದ್ದಾರೆ. ಅವರ ತ್ಯಾಗ, ಸೇವಾ ಮನೋಭಾವ ಮತ್ತು ಕರ್ತವ್ಯನಿಷ್ಠೆಯನ್ನು ಸಮಾಜ ಗೌರವಿಸಬೇಕು ಎಂದು ಹೇಳಿದರು.

ಪತ್ರಕರ್ತರ ಸಾಮಾಜಿಕ ಜವಾಬ್ದಾರಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ವಸ್ತುನಿಷ್ಠ ಹಾಗೂ ಸಮಾಜದ ಹಿತ ಕಾಪಾಡುವ ವರದಿಗಳನ್ನು ಪ್ರಕಟಿಸುವ ಮೂಲಕ ಜನರ ನಂಬಿಕೆಯನ್ನು ಉಳಿಸಿಕೊಳ್ಳಬೇಕು. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮಾಧ್ಯಮಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಡಾ. ಸುನೀಲ ಬುರಬುರೆ, ಡಾ. ಗೋಪಾಲರಾಜ, ಗ್ರೇಡ್-2 ತಹಸೀಲ್ದಾರ್ ವಿ.ಎ. ಮುಳಗುಂದಮಠ, ಕಂದಾಯ ನಿರೀಕ್ಷಕ ಬಸವರಾಜ ಕಾತ್ರಾಳ, ಸಂತೋಷ ಅಸ್ಕಿ, ಎಚ್.ಜೆ. ಭಾವಿಕಟ್ಟಿ, ಶಂಕರ ಮರಾಠೆ, ಸಂತೋಷ ಢೋಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img