ವಿಜಯಸಾಕ್ಷಿ ಸುದ್ದಿ, ವಿಜಯಪುರ: ದೀಪಾ ತಟ್ಟಿಮನಿ ಅವರು ಸಲ್ಲಿಸಿದ್ದ `ಇಂಪಾಕ್ಟ್ ಆಫ್ ಡಿಜಿಟಲ್ ಇಂಡಿಯಾ ಆನ್ ವುಮೆನ್: ಎ ಕೇಸ್ ಸ್ಟಡಿ ಆಫ್ ಕರ್ನಾಟಕ ಸ್ಟೇಟ್’ ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಪಿಎಚ್ಡಿ ಪದವಿ ನೀಡಿದೆ.
Advertisement
ದೀಪಾ ತಟ್ಟಿಮನಿ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರೊ. ಓಂಕಾರಗೌಡ ಕಾಕಡೆ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ದೀಪಾ ತಟ್ಟಿಮನಿ ಅವರನ್ನು ಕುಲಪತಿ ಪ್ರೊ. ಬಿ.ಕೆ. ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಕರ ಅಭಿನಂದಿಸಿದ್ದಾರೆ.