ಬೆಂಗಳೂರು:- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೂ ಡೀಪ್‌ಫೇಕ್ ಕಾಟ ಶುರುವಾಗಿದೆ.
Advertisement
ಈ ಹಿಂದೆ ನಟ-ನಟಿಯರ ಫೋಟೋಗಳನ್ನು ಡೀಪ್ ಫೇಕ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು. ಇದೀಗ ಮತ್ತೆ ಇದರ ಟ್ರೆಂಡ್ ಶುರುವಾಗಿದೆ. ಈ ಬಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಟಾರ್ಗೆಟ್ ಆಗಿದ್ದಾರೆ.
ಹಣಕಾಸು ಹೂಡಿಕೆ ಯೋಜನೆ ಉದ್ದೇಶಿಸಿ ಮಾತನಾಡಿರುವ ವಿಡಿಯೋವನ್ನು ಎಡಿಟ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಬೆನ್ನಲ್ಲೇ ದೂರು ದಾಖಲಾಗಿದ್ದು, ದೂರಿನ ಅನ್ವಯ ಬೆಂಗಳೂರಿನ ಮಲ್ಲೇಶ್ವರಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕೈಗೊಂಡಿದ್ದಾರೆ.


