ಜಮ್ಮು ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬಳಿಯ ‘ಮಿನಿ ಸ್ವಿಟ್ಜರ್ಲೆಂಡ್’ ಎಂದು ಕರೆಯಲ್ಪಡುವ ಪ್ರವಾಸಿ ತಾಣ ಬೈಸರನ್ನಲ್ಲಿ ಉಗ್ರರು ದಾಳಿ ಮಾಡಿದ್ದಾರೆ. ಈ ಕೃತ್ಯವನ್ನು ಇಡೀ ದೇಶವೇ ಖಂಡಿಸಿದೆ. ಹಲವು ಸಿನಿಮಾ ಸೆಲೆಬ್ರಿಟಿಗಳು ಸಹ ಕೃತ್ಯವನ್ನು ಖಂಡಿಸಿದ್ದಾರೆ. ಅದರಂತೆ ಟೀಮ್ ಇಂಡಿಯಾ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
Advertisement
ಪಹಲ್ಗಾಮ್ನಲ್ಲಿ ಅಮಾಯಕರ ಮೇಲೆ ನಡೆದ ಘೋರ ದಾಳಿಯಿಂದ ತೀವ್ರ ದುಃಖವಾಗಿದೆ. ಮೃತರ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪಗಳು. ಪ್ರಾಣ ಕಳೆದುಕೊಂಡ ಎಲ್ಲರ ಕುಟುಂಬಗಳಿಗೆ ಶಾಂತಿ ಮತ್ತು ಶಕ್ತಿ ನೀಡಲಿ ಮತ್ತು ಈ ಕ್ರೂರ ಕೃತ್ಯಕ್ಕೆ ನ್ಯಾಯ ದೊರಕಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ವಿರಾಟ್ ಕೊಹ್ಲಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಂಡಿದ್ದಾರೆ.