ನವದೆಹಲಿ:- ಆಮ್ ಆದ್ಮಿ ಪಕ್ಷದ ವರಿಷ್ಠ, ಮಾಜಿ ಮುಖ್ಯಮಂತ್ರಿ ಅರವಿಂದ ಕೆಜ್ರಿವಾಲ್ಗೆ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಸೋಲಾಗಿದ್ದು, 25 ವರ್ಷಗಳ ಬಳಿಕ ರಾಜಧಾನಿಯಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ಸತತ ಎರಡು ಬಾರಿ ದೆಹಲಿಯ ಗದ್ದುಗೆ ಏರಿದ್ದ ಎಎಪಿ ಮತ್ತು ಕೇಜ್ರಿವಾಲ್ಗೆ ಈ ಬಾರಿ ಅಬಕಾರಿ ನೀತಿ ಹಗರಣದಿಂದ ಭಾರಿ ಹಿನ್ನಡೆಯಾಗಿತ್ತು. ಅದು ಮತದಾನದ ಮೇಲೂ ಪರಿಣಾಮ ಬೀರಿದಂತಿದೆ.
ಇನ್ನೂ ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೇರುತ್ತಿರುವುದು ಕಾರ್ಯಕರ್ತರಲ್ಲಿ ಸಂತಸ ತಂದಿದೆ. ಕೇಂದ್ರದಲ್ಲಿ ಹಾಗೂ ರಾಷ್ಟ್ರ ರಾಜಧಾನಿಯಲ್ಲೂ ಬಿಜೆಪಿ ಅಧಿಕಾರದಲ್ಲಿ ಇದ್ದಂತಾಗುತ್ತದೆ. ಹಾಗಾದರೆ ರಾಷ್ಟ್ರರಾಜಧಾನಿಯಲ್ಲಿ ಬಿಜೆಪಿಯಿಂದ ಯಾರು ಸಿಎಂ ಆಗಲಿದ್ದಾರೆ? ಸಿಎಂ ರೇಸ್‌ನಲ್ಲಿ ಮುಂಚೂಣಿಯಲ್ಲಿರುವವರು ಯಾರು ಅನ್ನೋದನ್ನ ನೋಡೋದಾದರೆ…
* ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ದೆಹಲಿ ಸಿಎಂ ರೇಸ್‌ನಲ್ಲಿ ಪ್ರಮುಖರು. ಇವರು ಬಿಜೆಪಿಯ ಪ್ರಮುಖ ನಾಯಕ ಮತ್ತು ಪ್ರಭಾವಿ ಆಗಿದ್ದಾರೆ. ಇವರಿಗೆ ದೆಹಲಿಯಲ್ಲಿ ಸಿಎಂ ಆಗುವ ಅವಕಾಶ ಸಿಗುವ ಸಾಧ್ಯತೆ ಇದೆ.
* ನವದೆಹಲಿಯ ಸಂಸದೆ ಮತ್ತು ದಿವಂಗತ ಸುಷ್ಮಾ ಸ್ವರಾಜ್ ಅವರ ಪುತ್ರಿ ಬನ್ಸುರಿ ಸ್ವರಾಜ್ ಅವರು ದೆಹಲಿ ಮುಖ್ಯಮಂತ್ರಿಯಾಗುವ ಆಸೆ ವ್ಯಕ್ತಪಡಿಸಿದ್ದಾರೆ.
* ಮಾಜಿ ಕೇಂದ್ರ ಸಚಿವೆ ಮತ್ತು ಪ್ರಸಿದ್ಧ ನಾಯಕಿ ಸ್ಮೃತಿ ಇಆರಾನಿ ಅವರು ಕೂಡ ದೆಹಲಿ ಸಿಎಂ ರೇಸ್‌ನಲ್ಲಿ ಇದ್ದಾರೆ.
* ಹಿರಿಯ ಬಿಜೆಪಿ ನಾಯಕಿ ಮತ್ತು ಪ್ರಭಾವಿ ಭಾಷಣಕಾರರಾದ ಮೀನಾಕ್ಷಿ ಲೇಖಿ ಈ ರೇಸ್‌ನಲ್ಲಿ ಇದ್ದು ಬಿಜೆಪಿ ಮಹಿಳೆಯರನ್ನು ಸಿಎಂ ಮಾಡುವ ಸಾಧ್ಯತೆ ಇದೆ.
ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದಂತೆ ತೆರೆಮರೆಯಲ್ಲಿ ಸಿಎಂ ಸ್ಥಾನಕ್ಕಾಗಿ ಲಾಭಿ ಶುರುವಾಗಿದೆ. ಈಗಾಗಲೇ ಆಸಕ್ತ ಅಭ್ಯರ್ಥಿಗಳು ಸಿಎಂ ಸ್ಥಾನ ತಮ್ಮ ತೆಕ್ಕೆಗೆ ಪಡೆಯಲು ತಯಾರಿ ಶುರು ಮಾಡಿದ್ದಾರೆ. ಒಟ್ಟಿನಲ್ಲಿ ಸಿಎಂ ರೇಸ್‌ನಲ್ಲಿ ಇರುವ ಅಭ್ಯರ್ಥಿಗಳ ಪೈಕಿ ಮಹಿಳೆಯರಿಗೆ ಈ ಬಾರಿ ಸಿಎಂ ಸ್ಥಾನ ನೀಡಲಾಗುತ್ತದೆ ಎನ್ನುವ ಮಾತುಗಳೂ ಕೇಳಿ ಬಂದಿವೆ.



