ನವದೆಹಲಿ:- ದೆಹಲಿಯ ಜೈತ್‌ಪುರದ ಹರಿನಗರದಲ್ಲಿ ಜೋರು ಮಳೆಗೆ ಕಾಂಪೌಂಡ್ ಗೋಡೆ ಕುಸಿದು ಇಬ್ಬರು ಮಕ್ಕಳು ಸೇರಿ 7 ಮಂದಿ ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
ಹಲವಾರು ಗುಜರಿ ವ್ಯಾಪಾರಿಗಳು ನಗರದ ಹಳೆಯ ದೇವಾಲಯ ಒಂದರ ಬಳಿಯ ಕೊಳಗೇರಿ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಈ ಪ್ರದೇಶದಲ್ಲಿದ್ದ ಗೋಡೆ ಭಾರೀ ಮಳೆಯ ಹೊಡೆತಕ್ಕೆ ಹಠಾತ್ ಕುಸಿದಿದೆ. ಅವಶೇಷಗಳ ಅಡಿ 8 ಮಂದಿ ಸಿಲುಕಿದ್ದರು. ಅವರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಗಂಭೀರವಾಗಿ ಗಾಯಗೊಂಡಿದ್ದ 7 ಮಂದಿ ಸಾವನ್ನಪ್ಪಿದರು. ಮತ್ತೆ ಅಂತಹ ಘಟನೆಗಳು ಸಂಭವಿಸದಂತೆ ಈ ಜಾಗದಿಂದ ಜನರನ್ನು ಸ್ಥಳಾಂತರಿಸಿದ್ದೇವೆ ಎಂದು ಡಿಸಿಪಿ ಐಶ್ವರ್ಯ ಶರ್ಮಾ ತಿಳಿಸಿದ್ದಾರೆ.
ಇನ್ನೂ ಶುಕ್ರವಾರ ತಡರಾತ್ರಿಯಿಂದ ದೆಹಲಿಯಲ್ಲಿ ತೀವ್ರ ಮಳೆಯಾಗುತ್ತಿದೆ. ಇಂದು ಕೂಡ ಭಾರೀ ಮಳೆ ಆಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.