ದೆಹಲಿ ನಿಗೂಢ ಸ್ಪೋಟ: ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ!

0
Spread the love

ನವದೆಹಲಿ:- ಇಲ್ಲಿನ ಕೆಂಪು ಕೋಟೆಯ ಬಳಿ ಸೋಮವಾರ ಸಂಭವಿಸಿದ್ದ ನಿಗೂಢ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರ ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿದೆ.

Advertisement

ಸ್ಫೋಟದಲ್ಲಿ 12 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಸ್ಫೋಟದಲ್ಲಿ ಶಾಶ್ವತವಾಗಿ ಅಂಗವಿಕಲರಾದವರಿಗೆ 5 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಆಸ್ಪತ್ರೆಗಳಿಗೆ ತೆರಳಿ ಗಾಯಾಳುಗಳ ಆರೋಗ್ಯವನ್ನು ಸಿಎಂ ವಿಚಾಸಿದರು.

ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಸಿಎಂ ಗುಪ್ತಾ, ದೆಹಲಿಯಲ್ಲಿ ನಡೆದ ದುರಾದೃಷ್ಟಕರ ಘಟನೆಯು ಇಡೀ ನಗರವನ್ನೇ ಆಘಾತಕ್ಕೆ ದೂಡಿದೆ. ಈ ಕಷ್ಟದ ಸಮಯದಲ್ಲಿ, ದೆಹಲಿ ಸರ್ಕಾರವು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲಾ ಕುಟುಂಬಗಳಿಗೆ ಸಂತಾಪ ಸೂಚಿಸುತ್ತದೆ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here