HomeGadag Newsಫಲಾನುಭವಿಗಳಿಗೆ ನೇರ ಲಾಭ ತಲುಪಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

ಫಲಾನುಭವಿಗಳಿಗೆ ನೇರ ಲಾಭ ತಲುಪಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಪಿ) ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆ (ಟಿಎಸ್‌ಪಿ)ಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿವಿಧ ಇಲಾಖೆಗಳ ಅನುಷ್ಠಾನ ಪ್ರಗತಿಯನ್ನು ವಿವರವಾಗಿ ಪರಿಶೀಲಿಸಲಾಯಿತು.

ಸಭೆಯಲ್ಲಿ ಎಸ್‌ಸಿಪಿ/ಟಿಎಸ್‌ಪಿ ಯೋಜನೆಗಳಡಿ ನಿಗದಿತ ಗುರಿಗಳನ್ನು ಸಾಧಿಸುವಲ್ಲಿ ಕೆಲವು ಇಲಾಖೆಗಳು ಹಿಂದುಳಿದಿರುವುದು ಗಮನಕ್ಕೆ ಬಂದಿತು. ಈ ಹಿನ್ನೆಲೆಯಲ್ಲಿ ಪ್ರಗತಿ ಸಾಧಿಸದ ಸಂಬಂಧಿತ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಯೋಜನೆಗಳ ಉದ್ದೇಶ ಕೇವಲ ಅನುದಾನ ವೆಚ್ಚವಲ್ಲ, ಬದಲಾಗಿ ಅರ್ಹ ಫಲಾನುಭವಿಗಳಿಗೆ ನೇರ ಲಾಭ ತಲುಪಿಸುವುದೇ ಮುಖ್ಯವೆಂದು ಅವರು ಸ್ಪಷ್ಟಪಡಿಸಿದರು.

ಅನುಷ್ಠಾನದಲ್ಲಿ ವಿಳಂಬ, ಗುರಿ ಸಾಧನೆ ಕೊರತೆ ಹಾಗೂ ವರದಿ ಸಲ್ಲಿಕೆಯಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಮುಂದಿನ ಸಭೆಯೊಳಗೆ ಬಾಕಿ ಉಳಿದ ಕಾಮಗಾರಿಗಳು ಹಾಗೂ ಫಲಾನುಭವಿ ಆಧಾರಿತ ಯೋಜನೆಗಳನ್ನು ಪೂರ್ಣಗೊಳಿಸಿ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದರು.

ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯಡಿ ವಿವಿಧ ಇಲಾಖೆಗಳ ಅನುಷ್ಠಾನಿತ ಕಾಮಗಾರಿಗಳ ಆರ್ಥಿಕ ಹಾಗೂ ಭೌತಿಕ ಗುರಿ ಸಾಧನೆಗೆ ಕ್ರಮ ವಹಿಸಬೇಕು. ಎಸ್‌ಸಿ/ಎಸ್‌ಟಿ ಕಾಲೋನಿಯಲ್ಲಿ ಬೀದಿ ದೀಪ ಅಳವಡಿಕೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬಮಾಡದೇ ಕೈಗೊಳ್ಳಬೇಕು. ಕಾಮಗಾರಿ ಕೈಗೊಳ್ಳುವಾಗ ಗುಣಮಟ್ಟದ ಕಾಯ್ದುಕೊಳ್ಳುವುದು ಹಾಗೂ ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಮುಖ್ಯವಾಗಿದೆ. ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು. ಆಯಾ ಆರ್ಥಿಕ ಸಾಲಿನಲ್ಲಿ ಅನುಷ್ಠಾನಿತ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವತ್ತ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು. ಯಾವುದೇ ಕಾರಣಕ್ಕೂ ಬಿಡುಗಡೆಯಾದ ಅನುದಾನ ಲ್ಯಾಪ್ಸ್ ಆಗದಂತೆ ನೋಡಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಜಿ.ಪಂ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ಜಿ.ಪಂ ಅಧಿಕಾರಿ ಎಂ.ವಿ. ಚಳಗೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಎ. ತುಂಬರಮಟ್ಟಿ, ಅಂಗವಿಕಲ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಮಹಾಂತೇಶ್ ಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ, ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರಮೇಶ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ರಾಧಾ ಮಣ್ಣೂರ, ಕಾರ್ಮಿಕ ಇಲಾಖೆ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ. ಎಚ್.ಬಿ. ಹುಲಗಣ್ಣವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ವಿವಿಧ ಇಲಾಖೆಗಳು ಸಾಧಿಸಿದ ಪ್ರಗತಿ ವರದಿಯನ್ನು ಸಭೆಯಲ್ಲಿ ವಿವರಿಸಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಯೋಜನಾ ಅನುಷ್ಠಾನ ಘಟಕದ ಪ್ರತಿನಿಧಿಗಳು ಉಪಸ್ಥಿತರಿದ್ದು, ಪ್ರಗತಿಯ ವೇಗ ಹೆಚ್ಚಿಸಲು ಅಗತ್ಯ ಕ್ರಮಗಳ ಕುರಿತು ಚರ್ಚಿಸಲಾಯಿತು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!