ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸಿ: ಸಿಎಂ ಸಿದ್ದರಾಮಯ್ಯ

0
Spread the love

ಬೆಂಗಳೂರು; ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸುವ ಕಾರ್ಯ ಮಾಡಿ ಎಂದು ಮುಖ್ಯಮoತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement

ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತಾಗಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಅಂಗೀಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಜೊತೆಗೆ ಸರ್ಕಾರದ ನಿಲುವುಗಳಿಗೆ ತಕ್ಕಂತೆ ಕಾರ್ಯನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು. 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಪೂರ್ಣವಾಗಿ ಒಪ್ಪಿಕೊಂಡಿದೆ. ಇದರಿoದ ಸರ್ಕಾರಕ್ಕೆ 20ಸಾವಿರ ಕೋಟಿ ರೂ. ಹೆಚ್ಚಿನ ಹೊರೆಯಾಗಲಿದೆ. ಉಪ ಮುಖ್ಯಮoತ್ರಿ ಡಿ.ಕೆ. ಶಿವಕುಮಾರ್, ಸoಘದ ಅಧ್ಯಕ್ಷ ಷಡಕ್ಷರಿ, ಪದಾಧಿಕಾರಿಗಳು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here