ಕಲಬುರಗಿ:- ಸಂಘವೊಂದರ ನೋಂದಣಿ ಮಾಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸಹಕಾರಿ ಸಂಘಗಳ ಸಹಾಯಕ ನಿಬಂಧಕರು ಲೋಕಾ ಬಲೆಗೆ ಬಿದ್ದಿರುವ ಘಟನೆ ಜರುಗಿದೆ.
ಕಲಬುರಗಿ ಜಿಲ್ಲೆಯ ಸೇಡಂನ ಸಹಕಾರಿ ಸಂಘಗಳ ಸಹಾಯಕ ನಿಬಂಧಕರ ಕಚೇರಿಯಲ್ಲಿ ಇಬ್ಬರು ಅಧಿಕಾರಿಗಳು ಲೋಕಾ ಬಲೆಗೆ ಬಿದ್ದಿದ್ದಾರೆ. ಸಹಾಯಕ ನಿಬಂಧಕ ಮಲ್ಲಿಕಾರ್ಜುನ, ಹಾಗೂ ಕಂಪ್ಯೂಟರ್ ಆಪರೇಟರ್ ಸಂಗೀತಾ ಲೋಕಾ ಬಲೆಗೆ ಬಿದ್ದವರು.
ಕಲಬುರಗಿ ಜಿಲ್ಲೆಯ ಸೇಡಂನ ಸಹಕಾರಿ ಸಂಘಗಳ ಸಹಾಯಕ ನಿಬಂಧಕರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾ ಪೋಲಿಸ್ ಬಲೆಗೆ ಬಿದ್ದಿದ್ದಾರೆ. ಕೋಳಿ ಸಾಕಾಣಿಕೆದಾರ & ಮಾರಾಟಗಾರರ ಸಹಕಾರಿ ಸಂಘ ನೋಂದಾಯಿಸಲು ಬೀರಪ್ಪ ಎಂಬುವರಿಂದ ಆರೋಪಿತ ಅಧಿಕಾರಿಗಳು 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಮಾಹಿತಿ ಮೇರೆಗೆ ಕಲಬುರಗಿ ಲೋಕಾ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ನಡೆದ ದಾಳಿ ವೇಳೆ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ. ಕಚೇರಿಯಲ್ಲಿ ಮುಂಗಡವಾಗಿ 5 ಸಾವಿರ ಹಣ ಪಡೆಯುವಾಗ ಲೋಕಾ ಬಲೆಗೆ ಬಿದ್ದಿದ್ದಾರೆ. ಮಲ್ಲಿಕಾರ್ಜುನ, ಸಂಗೀತಾ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿರುವ ಲೋಕಾ ಅಧಿಕಾರಿಗಳು ವಿಚಾರಣೆ ಕೈಗೊಂಡಿದ್ದಾರೆ.



