ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚೆಗೆ ಸದನದಲ್ಲಿ ಮಾತನಾಡುವಾಗ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಸಂಬದ್ಧ ಹೇಳಿಕೆ ನೀಡಿದ್ದಾರೆ. ಇಂತಹ ಅಮಾನವೀಯ ಮತ್ತು ಅಸಂಬದ್ಧ ಹೇಳಿಕೆ ನೀಡಿದ ಅಮಿತ್ ಶಾ ಕೂಡಲೇ ರಾಜೀನಾಮೆ ನೀಡಬೇಕು ಎಂದು ಗದಗ-ಬೆಟಗೇರಿ ಶಹರ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಎಚ್.ಎ. ಶಾರುಖ್ ಒತ್ತಾಯಿಸಿದ್ದಾರೆ.
Advertisement
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಗೃಹ ಸಚಿವರ ಮನೋಭಾವನೆ ಜಾತೀಯತೆ, ತಾರತಮ್ಯ ಮಾಡುವ ಉದ್ದೇಶದಿಂದ ಕೂಡಿದೆ. ಪ್ರಜಾಪ್ರಭುತ್ವ ಸಿದ್ಧಾಂತ ಪ್ರತಿಪಾದಕ ನಾಯಕನಿಗೆ ಅವಮಾನ ಮಾಡುವ ಮತ್ತು ಪ್ರಜಾಪ್ರಭುತ್ವ, ಮಾನವೀಯತೆ ವ್ಯವಸ್ಥೆ ಮೇಲೆ ನಂಬಿಕೆ ಇಟ್ಟ ಸಮುದಾಯದ ಭಾವನೆಗೆ ಧಕ್ಕೆ ತರುವಂತಿದೆ ಎಂದಿದ್ದಾರೆ.