ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಅಂಜುಮನ್ ಸಂಸ್ಥೆಯ ಚುನಾವಣೆಯನ್ನು ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಸಬೇಕು. ಆದರೆ ಕಳೆದ ಹಲವು ವರ್ಷಗಳಿಂದ ಸಂಸ್ಥೆಯ ಚುನಾವಣೆ ನಡೆದಿಲ್ಲ. ಕೊನೆಯ ಚುನಾವಣೆ 2009ರಲ್ಲಿ ನಡೆದಿದ್ದು, ಮುಂದೆ ಪ್ರತಿ ಮೂರು ವರ್ಷಗಳ ಅವಧಿಗೆ ಚುನಾವಣೆ ನಡೆದಿಲ್ಲ ಎಂದು ರಾಜ್ಯ ಕೆಪಿಸಿಸಿ ವಿಭಾಗ ಬೆಂಗಳೂರು ಕಾಯದರ್ಶಿ ಯೂಸುಫ ಎನ್.ಡಂಬಳ ಆಕ್ಷೇಪಿಸಿದ್ದಾರೆ.
Advertisement
ಗದಗ ಜಿಲ್ಲೆಯ ರೋಣ, ಲಕ್ಷ್ಮೇಶ್ವರ, ಶಿರಹಟ್ಟಿ, ಹೊಳೆಆಲೂರ, ನರಗುಂದ, ಮುಳಗುಂದ ಹಾಗೂ ವಿವಿಧ ತಾಲೂಕುಗಳಲ್ಲಿ ಅಂಜುಮನ್ ಇಸ್ಲಾಂ ಸಂಸ್ಥೆಗೆ ಪ್ರತಿ ಮೂರು ವರ್ಷಕ್ಕೆ ಸರಿಯಾಗಿ ಚುನಾವಣೆ ನಡೆಯುತ್ತಿದೆ.
ಸಂಬಂಧಪಟ್ಟ ಅಧಿಕಾರಿಗಳು ಗದಗ ನಗರದ ಅಂಜುಮನ್ ಇಸ್ಲಾಂ ಸಂಸ್ಥೆಗೆ ಕಾನೂನು ರೀತಿಯಲ್ಲಿ ತಕ್ಷಣವೇ ಚುನಾವಣೆ ಮಾಡಬೇಕು ಎಂದು ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.