ಗದಗ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಟೈರ್‌ಗೆ ಬೆಂಕಿ ಹಚ್ಚಿ, ರಾಜ್ಯ ಹೆದ್ದಾರಿ ತಡೆದು ಗದಗ ಜಿಲ್ಲಾ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಯಿತು.
Advertisement
ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ನೇತೃತ್ವದಲ್ಲಿ ಹುಬ್ಬಳ್ಳಿ-ಹೊಸಪೇಟೆ ರಾಜ್ಯ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ಮಾಡಿ ರಾಜ್ಯ ಹೆದ್ದಾರಿಯಲ್ಲಿ ಟೈರ್ʼಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೈಕೋರ್ಟ್ ರಾಜ್ಯಪಾಲರ ನಿರ್ಧಾರ ಎತ್ತಿ ಹಿಡಿದಿದೆ. ತನಿಖೆಯಾಗುವವರೆಗೂ ಸಿಎಂ ರಾಜೀನಾಮೆ ಕೊಡುವುದು ಸೂಕ್ತ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿ ಒತ್ತಾಯ ಮಾಡಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.