ವಿಜಯಸಾಕ್ಷಿ ಸುದ್ದಿ, ಗದಗ : ಗದಗ-ಬೆಟಗೇರಿ ಅವಳಿ ನಗರ ಕೊಳಗೇರಿ ಪ್ರದೇಶಗಲ್ಲಿ ವಸತಿ ಸೌಲಭ್ಯ ಕಲ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಬ್ಸಿಡಿ ಅನುದಾನ ಮತ್ತು ಫಲಾನುಭವಿಗಳ ವಂತಿಕೆ ಹಣದಲ್ಲಿ 863 ಮನೆಗಳು ಮಂಜೂರಾಗಿದೆ. ಆದರೆ ಈವರೆಗೂ ಯಾವುದೇ ಮನೆಗಳು ಪೂರ್ಣಗೊಳಿಸದೇ ಕಳಪೆ ಕಾಮಗಾರಿ ಮಾಡಿ ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆಸಿರುವ ಗದಗ ಉಪ-ವಿಭಾಗದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರ ಅಮಾನತಿಗೆ ಆಗ್ರಹಿಸಿ ಸ್ಲಂ ಜನಾಂದೋನ-ಕರ್ನಾಟಕ ಮತ್ತು ಗದಗ ಜಿಲ್ಲಾ ಸ್ಲಂ ಸಮಿತಿಯ ನೇತೃತ್ವದಲ್ಲಿ ರ‍್ಯಾಲಿ ನಡೆಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್.ಮಾನ್ವಿ ಹೇಳಿದರು.
ಅವರು ನಗರದಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಗದಗ ಮತ್ತು ಕೊಪ್ಪಳ ಜಿಲ್ಲೆಗೆ ವಸತಿ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ವಸತಿ ಇಲಾಖೆಯಿಂದ ನೀಡಲಾಗಿರುವ ಕೊಟ್ಯಾಂತರ ರೂ ಹಣವನ್ನು ಗುತ್ತಿಗೆದಾರರ ಜೊತೆಗೆ ಶಾಮೀಲಾಗಿ ಸ್ಲಂ ಜನರ ಅನುದಾನಗಳನ್ನು ಲೂಟಿ ಮಾಡಲಾಗಿದೆ ಎಂದು ಆರೋಪಿಸಿದರು.
ಭ್ರಷ್ಟಾಚಾರ ನಡೆಸಿರುವ ಗದಗ ಉಪ-ವಿಭಾಗದ ಕೊಳಗೇರಿ ಅಭಿವೃದ್ಧಿ ನಿಗಮದ ಸಹಾಯಕ ಕಾರ್ಯಪಾಲಕ ಅಭಿಯಂತರರನ್ನು ಕೂಡಲೇ ಅಮಾನತು ಮಾಡಬೇಕೆಂದು ಆಗ್ರಹಿಸಿ ಬೃಹತ್ ಪ್ರತಿಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಗದಗ ಜಿಲ್ಲಾ ಸ್ಲಂ ಸಮಿತಿ ಉಪಾಧ್ಯಕ್ಷ ರವಿಕುಮಾರ ಬೆಳಮಕರ, ಕಾರ್ಯದರ್ಶಿ ಅಶೋಕ ಕುಸಬಿ, ಸ್ಲಂ ಸಮಿತಿ ಮುಖಂಡರಾದ ಹಾಗೂ ಶಿಕ್ಕಲಗಾರ, ದುರ್ಗಪ್ಪ ನವಲಗುಂದ, ಇಬ್ರಾಹಿಂ ಮುಲ್ಲಾ, ಮಂಜುನಾಥ ಶ್ರೀಗಿರಿ, ಶಿವಾನಂದ ಶಿಗ್ಲಿ, ಮೆಹಬೂಬಸಾಬ ಬಳ್ಳಾರಿ, ರೇವಣ್ಣಪ್ಪ ಲಕ್ಕುಂಡಿ, ಬಾಷಾಸಾಬ ಡಂಬಳ, ಖಾಜಾಸಾಬ ಇಸ್ಮಾಯಿಲನವರ ಮುಂತಾದವರು ಉಪಸ್ಥಿತರಿದ್ದರು.