ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

0
Demand for withdrawal of prosecution order against Governor's CM
Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಆದೇಶ ನೀಡಿದ್ದನ್ನು ಖಂಡಿಸಿ ಮತ್ತು ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸಿ ಗುರುವಾರ ಶಿರಹಟ್ಟಿಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಹಸೀಲ್ದಾರರ ಮೂಲಕ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಲಾಯಿತು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹುಮಾಯೂನ್ ಮಾಗಡಿ, ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ವಿಚಾರಣೆಯಲ್ಲಿ ರಾಜ್ಯ ಹಾಗೂ ಕೇಂದ್ರ ಬಿಜೆಪಿ ನಾಯಕರ ಸೂಚನೆ ಮೇರೆಗೆ ತನಿಖೆಗೆ ಆದೇಶ ಮಾಡಿರುವುದು ಅಸಂವಿಧಾನಿಕವಾಗಿದೆ. ಕೂಡಲೇ ರಾಜ್ಯಪಾಲರು ಈ ಆದೇಶವನ್ನು ರದ್ದುಪಡಿಸಬೇಕು.

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಸೂಚನೆ ಮೇರೆಗೆ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದು ಖಂಡನೀಯ. ರಾಜ್ಯದಲ್ಲಿ ಚುನಾಯಿತ ಸರಕಾರವನ್ನು ಅಸ್ಥಿರಗೊಳಿಸಲು ಪ್ರತಿಪಕ್ಷಗಳು ಪ್ರಯತ್ನ ಮಾಡುತ್ತಿವೆ ಎಂದರು.

ಮಾಜಿ ಶಾಸಕರಾದ ಜಿ.ಎಸ್. ಗಡ್ಡದ್ದೇವರಮಠ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಜಿ.ಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ಪ.ಪಂ ಅಧ್ಯಕ್ಷೆ ದೇವಕ್ಕ ಗುಡಿಮನಿ, ಉಪಾಧ್ಯಕ್ಷೆ ನೀಲವ್ವ ಹುಬ್ಬಳ್ಳಿ, ದೇವಪ್ಪ ಲಮಾಣಿ, ಡಿ.ಕೆ. ಹೊನ್ನಪ್ಪನವರ, ಎಲ್.ಡಿ. ಪಾಟೀಲ, ಹೊನ್ನೇಶ ಪೋಟಿ, ಮಂಜುನಾಥ ಘಂಟಿ, ಫಕ್ಕೀರೇಶ ಮ್ಯಾಟಣ್ಣನವರ, ಚಾಂದಸಾಬ ಮುಳಗುಂದ, ಮುತ್ತುರಾಜ ಭಾವಿಮನಿ, ಹಮೀದ ಸನದಿ, ಬುಡನಶ್ಯಾ ಮಕಾನದಾರ, ಅಜ್ಜು ಪಾಟೀಲ, ಸಿದ್ದು ಪಾಟೀಲ, ಅಶರತಅಲಿ ಢಾಲಾಯತ, ಮಾಬುಸಾಬ ಲಕ್ಷ್ಮೇಶ್ವರ, ಸಂತೋಷ ಕುರಿ, ಸೋಮನಗೌಡ ಮರಿಗೌಡ, ಮಹಾಂತೇಶ ದಶಮನಿ, ಮಹೇಂದ್ರ ಉಡಚಣ್ಣವರ, ದೇವಪ್ಪ ಬಟ್ಟೂರ, ಈರಣ್ಣ ಚವ್ಹಾಣ, ಜಗದೀಶ ಇಟ್ಟೇಕಾರ, ನಜೀರ ಡಂಬಳ ಮುಂತಾದವರು ಉಪಸ್ಥಿತರಿದ್ದರು.

ಕಾಂಗ್ರೆಸ್ ಮುಖಂಡ ಗುರುನಾಥ ದಾನಪ್ಪನವರ ಮಾತನಾಡಿ, ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರದಲ್ಲಿ 6 ಜನ ದಲಿತ ಮುಖಂಡರು ಸಚಿವರಾಗಿದ್ದಾರೆ. 5ಕ್ಕೂ ಹೆಚ್ಚು ಅಲ್ಪಸಂಖ್ಯಾತ ಮುಖಂಡರು ಸಚಿವರಾಗಿದ್ದಾರೆ. ಬಿಜೆಪಿ ಸರಕಾರ ಇದ್ದಾಗ ಓರ್ವ ದಲಿತ ವ್ಯಕ್ತಿ ಮಾತ್ರ ಸಚಿವರಾಗಿದ್ದರು. ಸಿಎಂ ಸಿದ್ದರಾಮಯ್ಯ ಎಲ್ಲ ಜಾತಿ, ಜನಾಂಗದವರ ನಾಯಕರಾಗಿ ಹೊರಹೊಮ್ಮಿದ್ದಾರೆ. ಇಂತಹವರ ಮೇಲೆ ಪ್ರಾಸಿಕ್ಯೂಶನ್‌ಗೆ ಆದೇಶ ನೀಡಿರುವುದು ಸರಿಯಲ್ಲ ಎಂದರು.

 


Spread the love

LEAVE A REPLY

Please enter your comment!
Please enter your name here