HomeGadag Newsಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಲೋಕಸಭಾ ಸಾರ್ವತ್ರಿಕ ಚುನಾವಣೆ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ ಲಕ್ಷ್ಮೇಶ್ವರ ಪುರಸಭೆಯ ಮುಖ್ಯಾಧಿಕಾರಿ ಹಾಗೂ ಕಿರಿಯ ಆರೋಗ್ಯ ನಿರೀಕ್ಷಕರ ಮೇಲೆ ಶಿಸ್ತು ಕ್ರಮ ಜರುಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣಶೆಟ್ಟಿ ಬಣದ ತಾಲೂಕಾಧ್ಯಕ್ಷ ಮಹೇಶ ಕಲಘಟಗಿ ಹೇಳಿದರು.

ಈ ಬಗ್ಗೆ ತಹಸೀಲ್ದಾರ ಕಚೇರಿಯಲ್ಲಿ ಗ್ರೇಡ್-2 ತಹಸೀಲ್ದಾರ ಮಂಜುನಾಥ ಅಮಾಸಿ ಅವರಿಗೆ ಮನವಿ ಸಲ್ಲಿಸಿ ಮಾತನಾಡುತ್ತ, ಏಪ್ರಿಲ್ 17ರ ಸಂಜೆ ಮಾರುಕಟ್ಟೆಯಲ್ಲಿ ಲಕ್ಷ್ಮೇಶ್ವರ ಪುರಸಭೆಯ ಮುಖ್ಯಾಧಿಕಾರಿ ಸಂಚಾರಿದಳ ಅಧಿಕಾರಿ ಮತ್ತು ಕಿರಿಯ ಆರೋಗ್ಯ ನಿರೀಕ್ಷಕರು ಜೊತೆಯಾಗಿ ಕಸದ ಬುಟ್ಟಿ ವಿತರಣೆ ಕಾರ್ಯಕ್ರಮ ನಡೆಸಿದ್ದಾರೆ. ಈ ಇಬ್ಬರೂ ಜಿಲ್ಲೆಯ ಅಧಿಕಾರಿಗಳಾಗಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರ್ಕಾರದ ಯಾವುದೇ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಅಪರಾಧವಾಗಿರುತ್ತದೆ. ಈ ಇಬ್ಬರೂ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಶ್ರೇಯಾಂಕ ಹಿರೇಮಠ, ನವೀನ ಗುರಿಕಾರ, ಪ್ರವೀಣ ದಶಮನಿ, ಮಂಜುನಾಥ ಗಾಂಜಿ, ಅಂಬರೀಶ ಗಾಂಜಿ, ಮಹಾಂತೇಶ ಗುರಿಕಾರ, ಚಂದ್ರು ಪಾಣಿಗಟ್ಟಿ, ಈಶ್ವರಗೌಡ ಪಾಣಿಗಟ್ಟಿ, ಬಸನಗೌಡ ಮನ್ನಂಗಿ, ತೇಜು ರವಿ ಗುರಿಕಾರ, ಮಲ್ಲನಗೌಡ ಪಾಟೀಲ, ಶಿವರಾಜ್ ಬಾಳಿಹಳ್ಳಿಮಠ, ವೀರೇಶ ಹಗ್ಗರದ, ಬಸನಗೌಡ ಅಡರಕಟ್ಟಿ ಮುಂತಾದವರಿದ್ದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!