ವಿಜಯಸಾಕ್ಷಿ ಸುದ್ದಿ, ಗದಗ: ಉತ್ತರ ಕರ್ನಾಟಕದ ಹತ್ತಾರು ಹಳ್ಳಗಳು ಸೇರಿ ಬೃಹದಾಕಾರದಲ್ಲಿ ಹರಿಯುವ ಬೆಣ್ಣೆ ಹಳ್ಳದ ನೀರಿನಿಂದ ಪ್ರತಿವರ್ಷ ಲಕ್ಷಾಂತರ ಹೆಕ್ಟೇರ್ ಬೆಳೆ ಹಾನಿಯಾಗುತ್ತಿದ್ದು, ಸರಕಾರ ಬೆಣ್ಣೆ ಹಳ್ಳಕ್ಕೆ ಬ್ಯಾರೇಜ್ ನಿರ್ಮಿಸುವ ಮೂಲಕ ನೀರಿನ ಸದ್ಬಳಕೆ ಮಾಡಿಕೊಳ್ಳಲು ಅನುಕೂಲ ಮಾಡಿಕೊಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಕೋಡಿಹಳ್ಳಿ ಚಂದ್ರಶೇಖರ ಬಣದ ಗದಗ ಜಿಲ್ಲಾ ಘಟಕದ ಅಧ್ಯಕ್ಷ ಶಂಕರಗೌಡ ಜಾಯನಗೌಡ್ರ ಆಗ್ರಹಿಸಿದರು.
ತಾಲೂಕಿನ ಸೊರಟೂರನಲ್ಲಿ ಗ್ರಾಮದಲ್ಲಿ ನಡೆದ ಗೋಲಿಬಾರ್ ಘಟನೆಯಲ್ಲಿ ಮೃತರಾದ ರೈತ ಹುತಾತ್ಮರ ಗದ್ದುಗೆಗೆ ಪೂಜೆ ನೆರವೇರಿಸಿ, ಶ್ರದ್ಧಾಂಜಲಿ ಸಲ್ಲಿಸಿ ಅವರು ಮಾತನಾಡಿ, ರೈತ ಹುತಾತ್ಮರಾದ ಮಹಾಲಿಂಗಪ್ಪ ಗಿಡ್ಡಕೆಂಚಣ್ಣವರ, ಚನ್ನಬಸಪ್ಪ ನಿರ್ವಾಣಶೆಟ್ಟರ, ದೇವಲಪ್ಪ ಲಮಾಣಿ ಅವರನ್ನು ಸ್ಮರಿಸಿದರು.
ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ರೈತರಿಗೆ ಅಗತ್ಯವಾಗಿರುವ ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕವಾಗಿ ಪೂರೈಸಬೇಕು. ತಕ್ಷಣ ರಾಜ್ಯ ಸರಕಾರ ರೈತರಿಗೆ ಅಗತ್ಯವಿರುವ ಗೊಬ್ಬರ ವಿತರಿಸಬೇಕು ಎಂದು ಶಂಕರಗೌಡ ಜಾಯನಗೌಡ್ರ ಒತ್ತಾಯಿಸಿದರು.
ಜಿಲ್ಲಾ ಘಟಕದ ಉಪಾಧ್ಯಕ್ಷ ರಾಮಣ್ಣ ಕಮ್ಮಾರ, ಜಿಲ್ಲಾ ಘಟಕದ ಸಂಚಾಲಕ, ಸಾಮಾಜಿಕ ಹೋರಾಟಗಾರ ಬಸವಣ್ಣೆಯ್ಯ ಹಿರೇಮಠ ಮಾತನಾಡಿದರು.
ಈ ಸಂದರ್ಭದಲ್ಲಿ ರೈತ ಸಂಘದ ಗದಗ ತಾಲೂಕು ಅಧ್ಯಕ್ಷ ಮಂಜುನಾಥ ಎಂ.ವಡ್ಡರ, ರೈತ ಮುಖಂಡರಾದ ಭದ್ರೇಶ ಕುಸ್ಲಾಪೂರ, ಬೂದಪ್ಪ ಹಳ್ಳಿ, ಚನ್ನವೀರಯ್ಯ ಹೊಸಮಠ, ಶಿವಜೋಗಯ್ಯ ಹಿರೇಮಠ, ಯಲ್ಲಪ್ಪ ಅಡ್ನೂರ, ಮಂಜುನಾಥಸ್ವಾಮಿ ಹಿರೇಮಠ, ಫಕ್ಕೀರೇಶ ಸುಗ್ರಿ, ವೀರೇಶ ಮಾಂಡ್ರೆ, ಮಂಜಣ್ಣ ಬುರ್ಲಿ, ಮುತ್ತಪ್ಪ ಹಟ್ಟಿ, ಮಹಾಂತೇಶ ಹಳ್ಳಿ, ಮಾರುತಿ ಹುಲಿಕಟ್ಟಿ, ವೀರಣ್ಣ ಗುಗ್ಗರಿ, ಹನಮಂತಪ್ಪ ಘೋಡಕೆ, ಕನಕಪ್ಪ ಬೇಗೂರ, ಫಕ್ಕೀರಪ್ಪ ತೋಪಿನ, ಮಲಕಾಜಪ್ಪ ಗಿಡ್ಡಕೆಂಚಣ್ಣವರ, ಪರಶುರಾಮ ಹೂಗಾರ ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.