ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ತಾಲೂಕನ್ನು ತಕ್ಷಣವೇ ಬರಪೀಡಿತ ತಾಲೂಕು ಎಂದು ಘೋಷಿಸಿ, ರೈತರಿಗೆ ವಿಶೇಷ ಪರಿಹಾರ, ಬೆಳೆ ವಿಮೆ, ಸಾಲಮನ್ನಾ ಹಾಗೂ ತುರ್ತು ನೆರವು ಒದಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಸೋಮವಾರ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಮುಖಂಡರು, ಮಳೆ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರ ನೆರವಿಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.
ಮನವಿ ಸಲ್ಲಿಸುವ ವೇಳೆ ಕರವೇ ತಾಲೂಕು ಅಧ್ಯಕ್ಷ ವೀರೇಶ ಪಸಾರದ, ಮುತ್ತುರಾಜ ಮುಂಡವಾಡ, ದೇವೇಂದ್ರ ಶಿಂಧೆ, ಇಮ್ರಾನ ಬಾವಿಕಟ್ಟಿ, ಸೊಹೈಲ್ ನದಾಫ್, ಮಂಜಣ್ಣ ದೇಸನಹಳ್ಳಿ, ತೌಶಿಫ ವಡ್ಡಟ್ಟಿ, ಮಲಿಕ್ ನಗಾರಿ, ಅನ್ವರ್ ಬರದ್ವಾಡ, ಮೋದಿನ್ ಪರೀಟ, ಇಮ್ರಾನ ಶಿಗ್ಲಿ, ಬುಡ್ಡೇಸಾಬ ಮುಳಗುಂದ, ಇಮಾಮ ಇಟಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.



