HomeGadag Newsಗದಗ ಜಿಲ್ಲಾ ಸ್ಲಂ ಸಮಿತಿ ನೇತೃತ್ವದಲ್ಲಿ ಸ್ಲಂ ನಿವಾಸಿಗಳಿಂದ ಪ್ರತಿಭಟನೆ

ಗದಗ ಜಿಲ್ಲಾ ಸ್ಲಂ ಸಮಿತಿ ನೇತೃತ್ವದಲ್ಲಿ ಸ್ಲಂ ನಿವಾಸಿಗಳಿಂದ ಪ್ರತಿಭಟನೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆಯನ್ನು ಸುಮಾರು ಒಂದೂವರೆ ವರ್ಷಗಳ ಕಾಲ ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ರಾಜ್ಯಾದಂತ ಹೊಸ ಪಡಿತರ ಚೀಟಿಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಸಾಕಷ್ಟು ತೊಡಕುಗಳಿವೆ. ಈ ತೊಂದರೆಯನ್ನು ಸರಿಪಡಿಸಲು ಆಗ್ರಹಿಸಿ ಸ್ಲಂ ಜನಾಂದೋಲನ-ಕರ್ನಾಟಕ ರಾಜ್ಯ ಸಮಿತಿಯ ಕರೆಯ ಮೇರೆಗೆ ಗದಗ ಜಿಲ್ಲಾ ಸ್ಲಂ ಸಮಿತಿ ನೇತೃತ್ವದಲ್ಲಿ ನೂರಾರು ಸ್ಲಂ ನಿವಾಸಿಗಳು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆಹಾರ ಇಲಾಖೆ ಸಚಿವಾರಾದ ಕೆ.ಹೆಚ್. ಮುನಿಯಪ್ಪ ಅವರಿಗೆ ಮನವಿ ಸಲ್ಲಿಸಿದರು.

ಸ್ಲಂ ಜನಾಂದೋಲನ-ಕರ್ನಾಟಕದ ರಾಜ್ಯ ಸಂಚಾಲಕ ಹಾಗೂ ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್.ಮಾನ್ವಿ ಮಾತನಾಡಿ, ಪಡಿತರ ಚೀಟಿಯು ಒಂದು ಪ್ರಮುಖ ದಾಖಲೆಯಾಗಿದ್ದು, ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ ಪಡೆಯಲು ಕಡ್ಡಾಯವಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸಲು ಆನ್‌ಲೈನ್ ಸೆಂಟರ್‌ಗಳಿಗೆ ಜನರು ಹೋಗಿ ಅರ್ಜಿಗಳನ್ನು ಸಲ್ಲಿಸಲು ಹಲವು ಸಮಸ್ಯೆಗಳಿದ್ದು, ದಿನವೊಂದಕ್ಕೆಎ 4-5 ಅರ್ಜಿಗಳು ಸಲ್ಲಿಕೆ ಆಗುತ್ತಿವೆ.

ಇದರ ಬಗ್ಗೆ ಆಹಾರ ಸಚಿವರು ಗಂಭೀರವಾಗಿ ಪರಿಗಣಿಸಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಆಗುತ್ತಿರುವ ತೋಂದರೆಯನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಗದಗ ಜಿಲ್ಲಾ ಸ್ಲಂ ಸಮಿತಿ ಕಾರ್ಯದರ್ಶಿ ಅಶೋಕ ಕುಸಬಿ, ಮುಖಂಡರಾದ ಇಬ್ರಾಹಿಂ ಮುಲ್ಲಾ, ಮಂಜುನಾಥ ಶ್ರೀಗಿರಿ, ಮೆಹರುನಿಸಾ ಢಾಲಾಯತ, ಮೈಮುನ ಬೈರಕದಾರ, ಪ್ರೇಮಾ ಮಣವಡ್ಡರ, ಸುಶೀಲಮ್ಮ ಗೊಂದಾರ, ಮೆಹಬೂಬಸಾಬ ಬಳ್ಳಾರಿ, ಸಾಕ್ರುಬಾಯಿ ಗೋಸಾವಿ, ಖಾಜೇಸಾಬ ಇಸ್ಮಾಯಿಲನವರ, ಮಕ್ತುಮಸಾಬ ಮುಲ್ಲಾನವರ, ಮಲೇಶಪ್ಪ ಕಲಾಲ, ಮೆಹರುನಿಸಾ ಡಂಬಳ, ಚಂದ್ರಪ್ಪ ಲಕ್ಕುಂಡಿ, ದುರ್ಗಪ್ಪ ಮಣವಡ್ಡರ, ಶರಣಪ್ಪ ಬಿಂಗದಕಟ್ಟಿ, ಈರಮ್ಮ ಬೇವಿನಮರದ, ನಜೀರಅಹ್ಮದ ಹಾವಗಾರ, ಬಾಷಾಸಾಬ ಡಂಬಳ, ನಾಗರಾಜ ಮಣವಡ್ಡರ, ಶಿವಾನಂದ ಶಿಗ್ಲಿ, ರಾಜೇಸಾಬ ಸೈಯದ, ಮಂಜುನಾಥ ಒಂಟಿಯಲಿ ಮುಂತಾದವರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img