ವಿಜಯಸಾಕ್ಷಿ ಸುದ್ದಿ, ಧಾರವಾಡ: ಚಿತ್ರಕಲಾಶಿಲ್ಪಿ ಡಿ.ವಿ. ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ನಿಂದ ಏರ್ಪಡಿಸುವ ಕಲಾ ಚಟುಚಟಿಕೆಗಳಲ್ಲಿ ರಾಷ್ಟ್ರಮಟ್ಟದಲ್ಲಿ ಹೆಸರಾಂತ ಯುವ ಹಾಗೂ ಹಿರಿಯ ಚಿತ್ರಕಲಾವಿದರಿಗೆ ಪ್ರಶಸ್ತಿ ಪ್ರದಾನ ಮಾಡುವ ಪ್ರಕ್ರಿಯೆ ಅಂಗವಾಗಿ ಪ್ರಶಸ್ತಿ ಪುರಸ್ಕೃತ ಕಲಾವಿದರಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟಿನ ಅಧ್ಯಕ್ಷ ಬಿ.ಮಾರುತಿ ವಹಿಸಿ ಮಾತನಾಡಿ, ಪ್ರಶಸ್ತಿ ಪುರಸ್ಕೃತ ಕಲಾವಿದರು ಪ್ರತ್ಯಕ್ಷವಾಗಿ ಕಲಾಕೃತಿಗಳನ್ನು ರಚಿಸುವುದರಿಂದ ಚಿತ್ರಕಲೆಯನ್ನು ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಕಲಾಕೃತಿಗಳನ್ನು ಯಾವ ರೀತಿ ರಚಿಸಬಹುದೆಂಬ ತಿಳುವಳಿಕೆ ಮೂಡುತ್ತದೆ ಹಾಗೂ ಕಲಾವಿದರಲ್ಲಿ ಕಲಾಸಂವಹನ ಏರ್ಪಡುತ್ತದೆ ಎಂದರು.
ಟ್ರಸ್ಟಿನ ಸದಸ್ಯ ಕಾರ್ಯದರ್ಶಿ ಕುಮಾರ ಬೆಕ್ಕೇರಿ ಸ್ವಾಗತಿಸಿದರು. ಟ್ರಸ್ಟಿನ ಸದಸ್ಯ ಡಾ. ಬಸವರಾಜ ಕುರಿಯವರ ಪರಿಚಯಿಸಿದರು. ಟ್ರಸ್ಟಿನ ಸದಸ್ಯ ಹಾಗೂ ಹಿರಿಯ ಕಲಾವಿದ ಸುರೇಶ ಹಾಲಭಾವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ವಿ.ಎಚ್. ಕುರಿಯವರ ನಿರೂಪಿಸಿದರು. ಟ್ರಸ್ಟಿನ ಹಿರಿಯ ಸದಸ್ಯ ಎಫ್.ವಿ. ಚಿಕ್ಕಮಠ ವಂದಿಸಿದರು.
ಕಾರ್ಯಕ್ರಮದಲ್ಲಿ ಲೋಹಿತ್ ನಾಯ್ಕರ್, ಈಶ್ವರ ಜೋಶಿ, ಡಾ. ಆನಂದ ಪಾಟೀಲ, ಸಿ.ಯು. ಬೆಳ್ಳಕ್ಕಿ, ಡಾ. ಪಾರ್ವತಿ ಹಾಲಭಾವಿ, ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮತ್ತು ಟ್ರಸ್ಟ್ ಸದಸ್ಯರು ಉಪಸ್ಥಿತರಿದ್ದರು.



