ವಿಜಯಸಾಕ್ಷಿ ಸುದ್ದಿ, ಮುಳಗುಂದ : ಪಟ್ಟಣದ ಸಮೀಪದ ಕುರ್ತಕೊಟಿ ಪ್ರಾರ್ಥಮಿಕ ಆರೋಗ್ಯ ಕೇಂದ್ರದಿಂದ ಮನೆ ಮನೆಗೆ ತೆರಳಿ ಲಾರ್ವಾಹಾರಿ ಗಪ್ಪು ಗ್ಯಾಬೋಸಿಯ ಮೀನುಗಳನ್ನು ಸಿಮೆಂಟ್ ತೊಟ್ಟಿಗಳು, ಕಲ್ಲುಬಾವಿ ಬಿಡುವ ಮೂಲಕ ಡೆಂಗ್ಯೂ ನಿಯಂತ್ರಣಕ್ಕಾಗಿ ಸಾರ್ವಜನಿಕರಲ್ಲಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.
Advertisement
ಈ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ನಿರೀಕ್ಷಕ ಮೈಲಾರಲಿಂಗ, ಸಾರ್ವಜನಿಕರು ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದ ಇಟ್ಟುಕೊಳ್ಳಬೇಕು. ಜ್ವರ ಕಂಡುಬಂದಲ್ಲಿ ತಕ್ಷಣ ಸಮೀಪದ ಸರಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.
ಆರೋಗ್ಯ ನಿರೀಕ್ಷಣಾಧಿಕಾರಿ ಮೈಲಾರಲಿಂಗ ಬಿಳಿಯಲಿ, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಸಾವಕ್ಕ ಮಾದಪ್ಪನವರ, ಭಾರತಿ ಇಳಿಗೇರ, ರೇಣುಕಾ ಲಕ್ಷ್ಮೇಶ್ವರ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಇದ್ದರು.