ಬೆಂಗಳೂರು: ಇಂದು ರಾಜ್ಯದಲ್ಲಿ 437 ಡೆಂಗ್ಯೂ ಕೇಸ್‌ಗಳು ದೃಢವಾಗಿದ್ದು, ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 388ಕ್ಕೇರಿದೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ 165 ಹೊಸ ಕೇಸ್‌ಗಳು ದಾಖಲಾಗಿದ್ದು, ಸದ್ಯ 91 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ 24 ಗಂಟೆಗಳಲ್ಲಿ 2704 ಟೆಸ್ಟ್ ನಡೆಸಲಾಗಿದ್ದು, ಈ ಪೈಕಿ 437 ಜನರಿಗೆ ಡೆಂಗ್ಯೂ ದೃಢವಾಗಿದೆ. ಬಿಬಿಎಂಪಿ ವ್ಯಾಪಿಯಲ್ಲಿ 165, ಬೆಂಗಳೂರು ನಗರ 10, ಬೆಂ.ಗ್ರಾಮಾಂತರ 5, ರಾಮನಗರ 14, ಕೋಲಾರ 19, ಚಿಕ್ಕಬಳ್ಳಾಪುರ 7, ತುಮಕೂರು 5, ಚಿತ್ರದುರ್ಗ 3, ದಾವಣಗೆರೆ 24, ಬೆಳಗಾವಿ 32, ಗದಗ 15, ಉತ್ತರ ಕನ್ನಡ 1, ಕಲಬುರಗಿ 20, ಬೀದರ್ 10, ಬಳ್ಳಾರಿ 4, ವಿಜಯನಗರ 1, ಕೊಪ್ಪಳ 3, ಮೈಸೂರು 17, ಮಂಡ್ಯ 47, ಹಾಸನ 6, ಉಡುಪಿ 10, ಚಿಕ್ಕಮಗಳೂರು 10, ಕೊಡಗು 9 ಕೇಸ್ ಪತ್ತೆಯಾಗಿವೆ



