ಬೆಂಗಳೂರು:- ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನೇಣು ಬಿಗಿದುಕೊಂಡು ಡೆಂಟಲ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜರುಗಿದೆ.
Advertisement
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು ಸೌಮ್ಯ ಗಣೇಶ್ ಎಂದು ಗುರುತಿಸಲಾಗಿದೆ. ರಾಜಾಜಿನಗರ ಖಾಸಗಿ ಕಾಲೇಜಿನಲ್ಲಿ ದ್ವೀತಿಯ ವರ್ಷದ ಡೆಂಟಲ್ ಓದುತ್ತಿದ್ದಳು. ನಿನ್ನೆ ಸಂಜೆ ನೇಣು ಬಿಗಿದುಕೊಂಡು ಮನೆಯಲ್ಲಿ ಆತ್ಮಹತ್ಯೆ ಶರಣಾಗಿದ್ದಾಳೆ. ಪರೀಕ್ಷೆ ಸಮಯದಲ್ಲಿ ಆತಂಕಗೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಕಳೆದ 15 ದಿನಗಳ ಹಿಂದೆ ಯುವತಿಗೆ ಪೋಷಕರು ಕೌನ್ಸೆಲಿಂಗ್ ಮಾಡಿಸಿದ್ದರು. ನಿನ್ನೆ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.