ಗದಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನವೀಕೃತ ಆಡಳಿತ ಕಚೇರಿಯನ್ನು ಗುರುವಾರ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ನೀಲಗುಂದ, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ. ರಾಜೇಂದ್ರ ಬಸರಿಗಿಡದ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಮೀನಾಕ್ಷಿ ಕೆ.ಎಸ್., ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಜೆ.ಸಿ. ಪ್ರಶಾಂತ, ಜಿ.ಪಂ ಮುಖ್ಯ ಯೋಜನಾಧಿಕಾರಿ ಎ.ಎ. ಕಂಬಾಳಿಮಠ, ಡಿಆರ್ಡಿಎ ಯೋಜನಾ ನಿರ್ದೇಶಕ ಎಂ.ವಿ. ಚಳಗೇರಿ, ನಿರ್ಮಿತಿ ಕೇಂದ್ರದ ಜಿ.ವಿ. ಶಿರೋಳ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Trending Now



