ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ನಗರದ ವಾಲ್ಮೀಕಿ ವೃತ್ತದಿಂದ ಹೊಸಮನಿ ಸಿದ್ದಪ್ಪ ವೃತ್ತದತ್ತ ಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಅಪಘಾತದಲ್ಲಿ ಎಸ್ಕಾರ್ಟ್ ವಾಹನದ ಮುಂಭಾಗ ಸಂಪೂರ್ಣ ನುಜ್ಜುನುಜ್ಜಾಗಿದ್ದು, ಬಸ್‌ನ ಹಿಂಭಾಗಕ್ಕೂ ಹಾನಿಯಾಗಿದೆ.
ಎಸ್ಕಾರ್ಟ್ ವಾಹನದ ಚಾಲಕ ಚನ್ನಬಸಪ್ಪ ಅರ್ಚಕ್ ಅತೀವೇಗದಲ್ಲಿ ಚಾಲನೆ ಮಾಡುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ಬಸ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾನೆ ಎಂದು ಹೇಳಲಾಗಿದೆ.
ಹಾವೇರಿಯಿಂದ ಗದಗಕ್ಕೆ ತೆರಳುತ್ತಿದ್ದ KA-27 F0726 ಸಂಖ್ಯೆಯ ಬಸ್‌ಗೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಹಾವೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.



