ಸೋಷಿಯಲ್ ಮೀಡಿಯಾದಲ್ಲಿ ಸೋನಿಯಾ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ವಿದೇಶಿ ಪ್ರಜೆ ವಿರುದ್ಧ FIR!

0
Spread the love

ಬೆಂಗಳೂರು:- ಸಾಮಾಜಿಕ ಜಾಲತಾಣಗಳಲ್ಲಿ ಸೋನಿಯಾ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ವಿದೇಶಿ ಪ್ರಜೆ ವಿರುದ್ಧ ಬೆಂಗಳೂರಿನಲ್ಲಿ FIR ದಾಖಲಾಗಿದೆ.

Advertisement

ಬಾಂಗ್ಲಾದೇಶ ಪ್ರಜೆ ಸಲಾಲುದ್ದೀನ್ ಸುಹೇಬ್ ಚೌಧರಿ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ಸಲಾಲುದ್ದೀನ್ ಸುಹೇಬ್, ಪಾಕಿಸ್ತಾನಿ ಐಎಸ್​ ಏಜೆಂಟ್ ರೀತಿ ಬಿಂಬಿಸಿ ಪೋಸ್ಟ್ ಹಾಕಿದ್ದ. ಹೀಗಾಗಿ ಕೋಮು ಸೌಹಾರ್ದತೆಗೆ ಧಕ್ಕೆ, ಶಾಂತಿ ಕದಡುವ ಪ್ರಯತ್ನಿಸಿದ ಆರೋಪದಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲಿಸಲಾಗಿದೆ.

ಇನ್ನೂ ಸೋನಿಯಾಗಾಂಧಿ ಅಂತರ್ ಧರ್ಮ ವಿವಾಹವಾಗಿದ್ದಾರೆ. ಅವರು ಕ್ರಿಶ್ಚಿಯನ್ ಧರ್ಮವನ್ನೇ ಪಾಲನೆ ಮಾಡುತ್ತಿದ್ದಾರೆ. ಅಂತರ್ ಧರ್ಮದಲ್ಲಿ‌ ಮದುವೆಯಾಗಿ ಭಾರತದ ಪೌರತ್ವ ಪಡೆದಿದ್ದಾರೆ’’ ಎಂದು ಸಲಾಲುದ್ದೀನ್ ಸುಹೇಬ್ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದ.

ಇಷ್ಟೇ ಅಲ್ಲದೆ, ‘‘ರಾಹುಲ್ ಗಾಂಧಿ ವಿದೇಶಿ ಸ್ನೇಹಿತರ ಜೊತೆ ಸೇರಿಕೊಂಡು ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿದ್ದಾರೆ’’ ಎಂದು ಪೋಸ್ಟ್ ಮಾಡಿದ್ದ. ಹೀಗಾಗಿ ಆತನ ವಿರುದ್ಧ FIR ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here