ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಬಿಜೆಪಿ ಎಂಎಲ್ಸಿ ಎನ್. ರವಿಕುಮಾರ್ ಹೇಳಿದ್ದ ಎನ್ನಲಾದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರವಿಕುಮಾರ್ಗೆ ರಿಲೀಫ್ ನೀಡಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಪದ ಬಳಸಿದ ಹಿನ್ನೆಲೆ ಎಂಎಲ್ಸಿ ರವಿಕುಮಾರ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ತನ್ನ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ರದ್ದುಗೊಳಿಸುವಂತೆ ಎಂಎಲ್ಸಿ ರವಿಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ರು. ಇಂದು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣಕುಮಾರ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ರವಿಕುಮಾರ್ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ರೆ.
ಸರ್ಕಾರದ ಪರವಾಗಿ ಎಸ್ ಪಿಪಿ ಬೆಳ್ಳಿಯಪ್ಪ ವಾದಮಂಡಿಸಿದ್ರು. ಮುಖ್ಯ ಕಾರ್ಯದರ್ಶಿ ತಮ್ಮ ಕುರಿತ ಹೇಳಿಕೆಯ ಬಗ್ಗೆ ದೂರು ನೀಡಿಲ್ಲ. ಮೂರನೇ ವ್ಯಕ್ತಿಯ ದೂರು ಆಧರಿಸಿ ಕೇಸ್ ದಾಖಲಾಗಿದೆ. ಹೇಳಿಕೆಯಲ್ಲಿ ಅಪರಾಧದ ಅಂಶಗಳಿಲ್ಲವೆಂದು ಎಂಎಲ್ ಸಿ ರವಿಕುಮಾರ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದಾರೆ. ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಕೃಷ್ಣಕುಮಾರ್ ಪೀಠದ ಎಂಎಲ್ಸಿ ರವಿಕುಮಾರ್ ವಿರುದ್ಧದ ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಿದೆ.