ವಿಜಯಸಾಕ್ಷಿ ಸುದ್ದಿ, ಗದಗ : ಐ.ಸಿ.ಎ.ಆರ್-ಕೆ.ಎಚ್. ಪಾಟೀಲ ಕೃಷಿ ವಿಜ್ಞಾನ ಕೇಂದ್ರ, ಹುಲಕೋಟಿ, ಕೃಷಿ ವಿಶ್ವವಿದ್ಯಾಲಯ ಧಾರವಾಡ, ಕೃಷಿ ಇಲಾಖೆ ಗದಗ ಹಾಗೂ MANAGE ಹೈದರಾಬಾದ್ ಇವರ ಸಂಯುಕ್ತಾಶ್ರಯದಲ್ಲಿ 2022-23ನೇ ಸಾಲಿನ ಗದಗ ಜಿಲ್ಲೆಯ ಕೃಷಿ ಪರಿಕರ ಮಾರಾಟಗಾರರಿಗೆ 40 ವಾರಗಳ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ ಕೋರ್ಸ್ (ದೇಸಿ) ತರಬೇತಿ ಪಡೆದು ಉತ್ತೀರ್ಣರಾದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಹಾಗೂ 15 ದಿನಗಳ ಸಮಗ್ರ ಪೋಷಕಾಂಶ ನಿರ್ವಹಣೆ ಸರ್ಟಿಫಿಕೇಟ್ ಕೋರ್ಸಿನ (ಸಿ.ಸಿ.ಐ.ಎನ್.ಎಮ್) ಉದ್ಘಾಟನಾ ಸಮಾರಂಭ ಇತ್ತೀಚೆಗೆ ಹುಲಕೋಟಿಯಲ್ಲಿ ಜರುಗಿತು.
ಕೃಷಿ ವಿಶ್ವವಿದ್ಯಾಲಯ ಧಾರವಾಡದ ವಿಸ್ತರಣಾ ನಿರ್ದೇಶಕ ಡಾ. ಎಸ್.ಎಸ್. ಅಂಗಡಿ ಸಮಾರಂಭದ ಉದ್ಘಾಟಿಸಿ ಮಾತನಾಡಿದರು. ರಾಜ್ಯ ನೋಡಲ್ ಅಧಿಕಾರಿ(ದೇಸಿ) ಹಾಗೂ ಸಮೇತಿ(ಉತ್ತರ) ನಿರ್ದೇಶಕ ಡಾ. ಎಮ್.ಗೋಪಾಲ, ಗದಗ ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ.ಎಚ್, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ಸುಧಾ ವ್ಹಿ.ಮಂಕಣಿ ಮಾತನಾಡಿದರು.
ಎನ್.ಎಚ್. ಭಂಡಿ ಸ್ವಾಗತಿಸಿದರು. ಡಾ. ವಿನಾಯಕ ನಿರಂಜನ್ ಕಾರ್ಯಕ್ರಮ ನಿರೂಪಿಸಿದರು.
ಎಸ್.ಕೆ. ಮುದ್ಲಾಪುರ ವಂದಿಸಿದರು.