ನವದೆಹಲಿ:- ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
Advertisement
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಸ್ವಸ್ಥರಾಗಿದ್ದು, ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ರಾತ್ರಿ 8 ಗಂಟೆ ಸುಮಾರಿಗೆ ಅವರ ಆರೋಗ್ಯದಲ್ಲಿ ವ್ಯತ್ಯಯವಾಗಿದ್ದು, ದೆಹಲಿಯ AIIMS ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಲ ಮಾಹಿತಿ ಪ್ರಕಾರ 92 ವರ್ಷದ ಮಾಜಿ ಪ್ರಧಾನಿ ಅವರನ್ನು ಆಸ್ಪತ್ರೆಯ ತುರ್ತು ವಿಭಾಗಕ್ಕೆ ಕರೆತರಲಾಗಿದೆ ಎಂದು ತಿಳಿದು ಬಂದಿದೆ. ಇನ್ನೂ ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿವಿ ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿ ಪ್ರಾಮುಖ್ಯತೆಯನ್ನು ಗಳಿಸಿದರು. ಆರ್ಥಿಕತೆಯನ್ನು ಪರಿವರ್ತಿಸುವ ವ್ಯಾಪಕ ಸುಧಾರಣೆಗಳನ್ನು ತಂದರು.
ಯುಪಿಎಯ ಎರಡು ಅವಧಿಯ ಪ್ರಧಾನಿಯಾಗಿ ಅವರು ಸೇವೆ ಸಲ್ಲಿಸಿದರು ಎನ್ನಲಾಗಿದೆ.