ದೇವನಹಳ್ಳಿ:- ಚಲಿಸುತ್ತಿದ್ದ ಕಾರೊಂದು ಹೆದ್ದಾರಿ ಮಧ್ಯೆಯೆ ಹೊತ್ತಿ ಉರಿದಿರುವ ಘಟನೆ ದೇವನಹಳ್ಳಿ ಹೊರ ವಲಯದ ಹೊಸಕೋಟೆ ದಾಬಸ್ ಪೇಟೆ ಹೆದ್ದಾರಿಯಲ್ಲಿ ಜರುಗಿದೆ.
ನೋಡ್ ನೋಡ್ತಿದ್ದಂತೆ ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಕಾರು ವೇಗವಾಗಿ ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ತಿದ್ದಂತೆ ಕಾರಿನಿಂದ ಮಾಲಿಕ ಇಳಿದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.



