ಬೆಂಗಳೂರು: ಅಧಿಕಾರದ ದಾಹಕ್ಕೆ ದೇವೇಗೌಡರು ರಾಜಕಾರಣ ಮಾಡ್ತಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ದೇವೇಗೌಡ್ರು ರಾಜಕೀಯ ನಿವೃತ್ತಿ ಘೋಷಿಸಲಿ ಎಂಬ ಸಿಪಿವೈ ಹೇಳಿಕೆಗೆ ಮಾತನಾಡಿದ ಅವರು, ದೇವೇಗೌಡರು ಅಧಿಕಾರಕ್ಕಾಗಿ ರಾಜಕಾರಣ ಮಾಡ್ತಿಲ್ಲ. ಅವರ ವಯಸ್ಸು 92, ದೇಶ, ರಾಜ್ಯ ಕಟ್ಟಲು ಅವರ ಮಾರ್ಗದರ್ಶನ ಬೇಕು ಅಂತ ಅನೇಕ ವೇಳೆ ಪ್ರಧಾನಿಯವರೇ ಹೇಳಿದ್ದಾರೆ.
ಇಲ್ಲಿ ಅಧಿಕಾರದ ದಾಹಕ್ಕೆ, ಅಧಿಕಾರಕ್ಕೆ ಅಂಟಿಕೊಂಡು ದೇವೇಗೌಡರು ರಾಜಕಾರಣ ಮಾಡ್ತಿಲ್ಲ. ಕಳೆದ 62 ವರ್ಷಗಳ ಅವರ ಪ್ರಾಮಾಣಿಕ ರಾಜಕೀಯ ಬದುಕಿನಲ್ಲಿ ಏನನ್ನೂ ಅಪೇಕ್ಷೆ ಇಟ್ಟುಕೊಂಡವರಲ್ಲ. ಅವರು ನಿವೃತ್ತಿ ಹೊಂದಬೇಕಾ? ಮುಂದುವರಿಬೇಕಾ ಅಂತ ರಾಜ್ಯದ ಜನ ತೀರ್ಮಾನ ಮಾಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.



